Advertisement

ನಿರಂತರ ಜಾಗೃತಿಯೊಂದಿಗೆ ನೆರವು ನೀಡಿ

10:03 PM May 26, 2021 | Team Udayavani |

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಗ್ರಾ. ಪಂ. ಕೋವಿಡ್‌ ಕಾರ್ಯಪಡೆ ಜನರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಬೇಕು ಮತ್ತು ಅಗತ್ಯ ನೆರವು ನೀಡಬೇಕೆಂದು ಶಾಸಕ ಸಿ.ಟಿ.ರವಿ ಹೇಳಿದರು. ಮಂಗಳವಾರ ತಾಲೂಕಿನ ತೇಗೂರು ಮತ್ತು ಕರ್ತಿಕೆರೆ ಗ್ರಾಮಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಡ ಮುಂಜಾಗೃತಾ ಕ್ರಮಗಳ ಕುರಿತು ಕಾರ್ಯಪಡೆಯೊಂದಿಗೆ ಸಭೆ ನಡೆಸಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಕು ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಗ್ರಾ.ಪಂ. ಕಾರ್ಯಪಡೆ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ನಿರಂತರ ಜಾಗೃತಿ ಮೂಡಿಸಬೇಕು. ಹೋಮ್‌ ಐಸೋಲೇಶನ್‌ ನಲ್ಲಿರುವರಿಗೆ ಆಹಾರದ ಕಿಟ್‌, ಮೆಡಿಸಿನ್‌, ಲಸಿಕೆ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಬೇಕೆಂದು ಸೂಚಿಸಿದರು.

ಆಶಾ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ಆರೋಗ್ಯ ತಪಾಸಣೆ ನಡೆಸಬೇಕು, ಹೊರಭಾಗದಿಂದ ಬಂದವರಿದ್ದಲ್ಲಿ ಮಾಹಿತಿ ಪಡೆದು ಕ್ವಾರಂಟೈನ್‌ ನಲ್ಲಿರಲು ಸೂಚಿಸಬೇಕು. ಮೇಲಾಧಿ ಕಾರಿಗಳ ಗಮನಕ್ಕೂ ತರಬೇಕು, ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ 25ಕ್ಕೂ ಹೆಚ್ಚು ಸೋಂಕಿತ ಪ್ರಕರಣ ಗಳು ಕಂಡುಬಂದಿರುವ ಗ್ರಾಮ ಪಂಚಾಯತ್‌ಗಳಲ್ಲಿ ನಿಯಂತ್ರಣಕ್ಕಾಗಿ ಕಾರ್ಯ ಪಡೆಯೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಸಖರಾಯಪಟ್ಟಣ, ಕಳಸಾಪುರ, ಅಲ್ಲಂಪುರ, ಸೇರಿದಂತೆ ವಿವಿಧ ಗ್ರಾಮಪಂಚಾಯತ್‌ ಗಳಲ್ಲಿ ಕೋವಿಡ್‌ ಟಾಸ್ಕ್ಫೋರ್ಸ್‌ ಸಭೆ ನಡೆಸಲಾಗಿದೆ. ಅತೀ ಹೆಚ್ಚು ಸೋಂಕಿತ ಪ್ರಕರಣಗಳು ಕಂಡು ಬರುತ್ತಿರುವ ಪಂಚಾಯತ್‌ಗಳಲ್ಲಿ ಕಾಲಕಾಲಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ. ಹಳ್ಳಿಗಳಲ್ಲಿ ಸ್ಯಾನಿಟೈಸ್‌ ಮಾಡುವಂತೆ ತಿಳಿಸಲಾಗಿದೆ.

ಸಂಕಷ್ಟದಲ್ಲಿರುವವರಿಗೆ ಪಡಿತರ, ವೈದ್ಯಕೀಯ ಸೇವೆ ನೀಡುವ ಮೂಲಕ ನೆರವು ನೀಡುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಆನಂದ್‌, ತಹಶೀಲ್ದಾರ್‌ ಡಾ|ಕೆ. ಜೆ. ಕಾಂತರಾಜ್‌, ಪಂಚಾಯತ್‌ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next