Advertisement
ಬುಧವಾರ ಕಳಸ ಪಟ್ಟಣದ ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಗದ ಲಕ್ಷಣಗಳು ಕಂಡುಬರುತ್ತಿದ್ದಂತೆ ಸೋಂಕಿತರು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಗೆ ಒಳಗಾಗಬೇಕು. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಕೇರ್ ಸೆಂಟರ್ ತೆರೆಯಲಾಗಿದ್ದು, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಗೆ ಒಳಪಡಿಸುವುದರಿಂದ ಸೋಂಕು ಉಲ್ಬಣಗೊಳ್ಳುತ್ತಿದ್ದು, ಇದನ್ನು ತಡೆಗಟ್ಟುವ ಉದ್ದೇಶದಿಂದ ಕೋವಿಡ್ ಆರೈಕೆ ಕೇಂದ್ರ ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಿದ್ಯಾರ್ಥಿ ವಸತಿ ನಿಯಲದಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
Related Articles
Advertisement
ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಡಳಿತ ಜಿಲ್ಲಾದ್ಯಂತ ಲಾಕ್‌ಡೌನ್ ವಿಧಿಸಿದ್ದು, ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಕೋವಿಡ್‌ಸೋಂಕು ನಿಯಂತ್ರಣಕ್ಕೆ ತರಲು ಜನ ಜಾಗೃತರಾಗಬೇಕು. ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು ಎಂದ ಅವರು, ಜಿಲ್ಲಾಡಳಿತ ದೊಂದಿಗೆ ಜನತೆ ಸಹಕರಿಸಿದಲ್ಲಿ ಕೋವಿಡ್ ಮುಕ್ತ ಜಿಲ್ಲೆಯಾಗಿಸಬಹುದು ಎಂದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಸೋಂಕಿತರಿಗೆ ಸೂಕ್ತ ಸಮಯಕ್ಕೆ ತುರ್ತುಚಿಕಿತ್ಸೆ ಸೌಲಭ್ಯ ನೀಡುವ ಉದ್ದೇಶದಿಂದ ಈ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದರು.
ಇಲ್ಲಿ ಸೋಂಕಿತರಿಗೆ ಪ್ರಾಥಮಿಕ ಹಂತದ ಚಿಕಿತ್ಸೆ ಸಿಗಲಿದೆ. ಕೋವಿಡ್‌ಗೆ ಎಲ್ಲಾ ರೀತಿಯ ಚಿಕಿತ್ಸೆ ಇಲ್ಲೆ ಸಿಗುತ್ತದೆ ಎಂಬ ಮನೋಭಾವ ನಿಮ್ಮಲ್ಲಿ ಬೇಡ. ಸೋಂಕಿನ ಚಿಕಿತ್ಸೆಗೆ ಅನೇಕ ಸೌಲಭ್ಯಗಳ ಅಗತ್ಯತೆ ಇದೆ. ಡಾಕ್ಟರ್, ನರ್ಸ್‌ಗಳ ಸೌಲಭ್ಯದ ಅಗತ್ಯವಿದೆ. ಜನರು ಎಚ್ಚರವಹಿಸಬೇಕು ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್, ಉಪವಿಭಾಗಾಧಿಕಾರಿ ಡಾ|ಎಚ್. ಎಲ್. ನಾಗರಾಜ್, ಮೂಡಿಗೆರೆ ತಹಶೀಲ್ದಾರ್ ರಮೇಶ್, ಕೊಪ್ಪ ಉಪವಿಭಾಗ ಪೊಲೀಸ್ ಉಪ ಅಧೀಕ್ಷಕ ರಾಜು, ಮೂಡಿಗೆರೆ ತಾಲೂಕು ಕೋವಿಡ್ ನೋಡೆಲ್ ಅಧಿ ಕಾರಿ ಡಾ|ಮಧುಸೂಧನ್, ಕಳಸ ಸಮುದಾಯ ಕೇಂದ್ರದ ವೈದ್ಯಾ ಧಿಕಾರಿ ಅನುಗೌರಿ ಉಪಸ್ಥಿತರಿದ್ದರು.