Advertisement
ಚಿಕ್ಕಮಗಳೂರು: ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ವಿಧಿ ಸಿದ್ದ ಲಾಕ್‌ಡೌನ್ ಜೂ.1ರ ಬೆಳಗ್ಗೆ 6ಗಂಟೆಗೆ ಮುಕ್ತಾಯವಾಗಲಿದ್ದು, ದಿನಸಿ ಅಂಗಡಿ, ಮೀನು ಮಾಂಸ, ಮದ್ಯ ಮಾರಾಟಕ್ಕೆ ಬೆಳಗ್ಗೆ 6ರಿಂದ 10ಗಂಟೆಯವರೆಗೂ ಅವಕಾಶ ನೀಡಿ ಪರಿಷ್ಕೃತ ಆದೇಶವನ್ನು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೊರಡಿಸಿದ್ದಾರೆ.
Related Articles
Advertisement
ಕೃಷಿ ಚಟುವಟಿಕೆಗೆ ಸಂಬಂಧಿ ಸಿದಂತೆ ಸರಕು ವಾಹನಗಳು ಓಡಾಡಲು ಅವಕಾಶ ನೀಡಲಾಗಿದೆ. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೃಷಿ ಚಟುವಟಿಕೆ ನಡೆಸಬಹುದಾಗಿದ್ದು, ತೋಟ ಕಾರ್ಮಿಕರಿಗೆ ಬೆಳಗ್ಗೆ ಕೆಲಸದ ಸ್ಥಳಕ್ಕೆ ತೆರಳಲು ಮತ್ತು ಸಂಜೆ ಮನೆಗೆ ವಾಪಸ್ ಬರಲು ಅನುಮತಿ ನೀಡಲಾಗಿದೆ. ಆದರೆ, ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯುವುದು ನಿರ್ಬಂ ಸಲಾಗಿದೆ. ಬ್ಯಾಂಕ್‌ಗಳು, ಇಶ್ಯೂರೆನ್ಸ್ ಕಚೇರಿಗಳು, ಗ್ರಾಮ ಒನ್ ಕೇಂದ್ರಗಳು, ಎಟಿಎಂ, ಪೋಸ್ಟ್ ಆಸ್‌ಗಳು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ತೆರೆಯಲು ಅನುಮತಿಸಲಾಗಿದ್ದು, ಕನಿಷ್ಠ ಪ್ರಮಾಣದ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಆಯುಷ್, ಪಶು ವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳು ನರ್ಸಿಂಗ್ ಹೋಮ್, ಪ್ರಯೋಗಾಲಯಗಳು, ಔಷಧಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಕೈಗಾರಿಕೆಗಳು, ಕೈಗಾರಿಕಾ ಸಂಸ್ಥೆಗಳು, ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು ಅಗತ್ಯವಿ ರುವ ಸಿಬ್ಬಂದಿ ಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಸರಕು ಸಾಗಣೆಗೆ ಅನುಮತಿ ನೀಡಿದ್ದು, ಕಾರ್ಯನಿರ್ವಹಿಸುವ ಸ್ಥಳಕ್ಕೆ ತೆರಳುವಾಗ ಮತ್ತು ವಾಪಸ್ ಬರುವಾಗ ತಪಾಸಣೆ ಸಂದರ್ಭದಲ್ಲಿ ಗುರುತಿನ ಚೀಟಿಯನ್ನು ಪ್ರದರ್ಶಿಸುವಂತೆ ತಿಳಿಸಲಾಗಿದೆ.
ಮದುವೆ ಕಾರ್ಯಕ್ರಮದಲ್ಲಿ 10ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಎಲ್ಲಾ ಸಭೆ ಸಮಾರಂಭಗಳನ್ನು ಜೂ.7ರವರೆಗೂ ನಿರ್ಬಂ ಧಿಸಲಾಗಿದೆ. ಕಟ್ಟಡ ಕಾರ್ಮಿಕರು ಸ್ಥಳೀಯವಾಗಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವುದನ್ನು ನಿರ್ಬಂಧಿ ಸಲಾಗಿದೆ. ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಮ್ ಡೆಲಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಅಂತ್ಯಕ್ರಿಯೆಯಲ್ಲಿ 5 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಗೆ ಹೊರ ಜಿಲ್ಲೆಯಿಂದ ಆಗಮಿಸುವರನ್ನು 14ದಿನಗಳವರೆಗೂ ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ತುರ್ತು ಸಂದರ್ಭದಲ್ಲಿ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದ್ದು ದಾಖಲೆಗಳನ್ನು ಪ್ರದರ್ಶಿಸುವಂತೆ ಸೂಚಿಸಲಾಗಿದೆ.