Advertisement

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 369 ಕೋಟಿ ರೂ. ಮಂಜೂರು

09:47 PM Jun 02, 2021 | Team Udayavani |

ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 2021-22ನೇ ಆರ್ಥಿಕ ವರ್ಷದಲ್ಲಿ 369 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Advertisement

ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ 169ರ ಹೆಬ್ರಿ ಕಾರ್ಕಳ ರಸ್ತೆ, ಕರಾವಳಿ ಜಂಕ್ಷನ್‌ ಮಲ್ಪೆ ಸಂಪರ್ಕಿಸುವ ರಸ್ತೆ ಚತುಷ್ಪಥೀಕರಣಕ್ಕೆ ಭೂಸ್ವಾ ಧೀನ ಮತ್ತು 29.1 ಕಿ.ಮೀ. ರಸ್ತೆ ನಿರ್ಮಾಣಕ್ಕೆ 350 ಕೋಟಿ ರೂ. ಭೂ ಸಾರಿಗೆ ಸಚಿವಾಲಯ ಮಂಜೂರು ಮಾಡಿದ್ದು ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ರ ಸೀತಾನದಿಯಿಂದ ಉಂಟಾಗುವ ತೊಂದರೆಯನ್ನು ತಪ್ಪಿಸಲು ತಡೆಗೋಡೆ ನಿರ್ಮಾಣ, ರಸ್ತೆ ಎತ್ತರೀಕರಣ, ನೆಮ್ಮಾರು ಬಳಿ ರಸ್ತೆ ಎತ್ತರೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ 19 ಕೋಟಿ ರೂ. ಅನುಮೋದನೆ ದೊರೆತಿದೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂಸಾರಿಗೆ ಸಚಿವರಾದ ನಿತಿನ್‌ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next