ಚಿಕ್ಕಮಗಳೂರು: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ದುಡಿಯುತ್ತಿರುವ ಎನ್‌ಜಿಒ ಸಂಸ್ಥೆಗಳ ಪದಾಧಿ ಕಾರಿಗಳನ್ನು ಕೋವಿಡ್ ವಾರಿಯರ್ ಎಂದು ಘೋಷಿಸಬೇಕೆಂದು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಒಕ್ಕೂಟದ ಪದಾ ಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರಿಗೆ ಮನವಿ ಸಲ್ಲಿಸಿದರು. ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜನಜಾಗೃತಿ, ಪಡಿತರ ವಿತರಣೆ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೆರವು ನೀಡುತ್ತಿರುವ ಎನ್‌ಜಿಒ ಸಂಸ್ಥೆಗಳ ಪದಾ ಧಿಕಾರಿಗಳು ಸೋಂಕು ತಮಗೂ ಹರಡಬಹುದೆಂಬ ಭಯದಿಂದ ಕೆಲ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್‌ಜಿಒ ಸಂಸ್ಥೆಗಳ ಪದಾಧಿ ಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಕೂಡಲೇ ಸರ್ಕಾರ ಕೋವಿಡ್ ವಾರಿಯರ್ ಎಂದು ಘೋಷಿಸಬೇಕು ಮತ್ತು ಅವರ ಕುಟುಂಬದ ಸದಸ್ಯರಿಗೆ ಕೋವಿಡ್ ಲಸಿಕೆ ತುರ್ತಾಗಿ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಹೇಳಿದರು.
ಎನ್ ಜಿಒ ಪದಾ ಧಿಕಾರಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ಸಿಬ್ಬಂದಿಗೆ ಆರೋಗ್ಯ ಭದ್ರತೆ, ಜೀವವಿಮೆ, ಸಾಮಾಜಿಕ ಭದ್ರತೆ, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟಂಬಗಳಿಗೆ 5ಲಕ್ಷ ರೂ. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಚಂದ್ರಮೌಳಿ, ನಿರ್ದೇಶಕ ಜೆ. ವಿನಾಯಕ ಇದ್ದರು.