Advertisement
ಚಿಕ್ಕಮಗಳೂರು: ಕಾಫಿನಾಡಿಗೆ ಮುಂಗಾರು ಪ್ರವೇಶಿಸಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಸುರಿದ ಮಳೆಯಿಂದ ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿತ್ತು.
Related Articles
Advertisement
ಯಾವುದೇ ಸಂದರ್ಭದಲ್ಲಿ ವಿಪತ್ತು ಸಂಭವಿಸಿದಾಗ ಸಕಾಲಕ್ಕೆ ನಿರ್ವಹಣೆ ಮಾಡಲು ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್‌ನಲ್ಲಿ 5.20 ಕೋಟಿ ರೂ. ಅನ್ನು ವಿಪತ್ತು ನಿರ್ವಹಣೆಗಾಗಿ ಕಾಯ್ದಿರಿಸಲಾಗಿದೆ. ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಈಗಾಗಲೇ ಕೃಷಿ ಚಟುವಟಿಕೆ ಭರದಿಂದ ಸಾಗುತ್ತಿದೆ. ಕೃಷಿ ಚಟುವಟಿಕೆಗೆ ಬೇಕಾಗುವ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. 37,128ಮೆಟ್ರಿಕ್‌ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, ಈಗಾಗಲೇ ಜಿಲ್ಲೆಯ ವಿವಿಧ ಗೋಡೌನ್‌ಗಳಲ್ಲಿ 40,693 ರಸಗೊಬ್ಬರ ದಾಸ್ತಾನಿದೆ. ಬೇಡಿಕೆಗಿಂತ 17,567 ಮೆಟ್ರಿಕ್ ಟನ್ ದಾಸ್ತಾನು ಹೊಂದಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಆರಂಭಗೊಂಡಿದ್ದು, ಭತ್ತ, ಮುಸುಕಿನಜೋಳ, ತೊಗರಿ, ಹಳಸಂದೆ, ಸೂರ್ಯಕಾಂತಿ, ಶೇಂಗಾ, ಹೆಸರು, ಉದ್ದು, ಹತ್ತಿ ಸೇರಿದಂತೆ 5,420 ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. 3,877ಕ್ವಿಂಟಲ್ ಬಿತ್ತನೆ ಬೀಜ ಪೂರೈಕೆಯಾಗಿದೆ. 1.085ಕ್ವಿಂಟಲ್ ಬಿತ್ತನೆ ಬೀಜ ರೈತರಿಗೆ ಪೂರೈಕೆ ಮಾಡಲಾಗಿದೆ. ಜನವರಿಯಿಂದ ಜೂನ್ ವರೆಗೆ ಸರಾಸರಿ 208ಮಿ. ಮೀ., ವಾಡಿಕೆ ಮಳೆಯಾಗಿದ್ದು, ಈಗಾಗಲೇ ಜಿಲ್ಲಾದ್ಯಂತ 410ಮಿ.ಮೀ. ಮಳೆಯಾಗಿದೆ.