ಚಿಕ್ಕಮಗಳೂರು: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಾರಾಂತ್ಯದ ಕರ್ಫ್ಯೂ ವಿಧಿಸಿದ್ದು ಅದರಂತೆ ಜಿಲ್ಲೆಯಲ್ಲೂ ವಾರಾಂತ್ಯದ ಕರ್ಫ್ಯೂ ಜಾರಿಗೊಳಿ ಸಿರುವುದಾಗಿ ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂ.18ರ ರಾತ್ರಿ 7 ಗಂಟೆಯಿಂದ ಜೂ.21ರ ಬೆಳಗ್ಗೆ 6 ಗಂಟೆಯವರೆಗೂ ಜಿಲ್ಲಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದಿ ದ್ದಾರೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಅನಗತ್ಯ ಸಂಚಾರವನ್ನು ನಿರ್ಬಂಧಿ ಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂ ದಿಗಳಿಗೆ ಸಂಚಾರ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ಸೇವೆಗಳನ್ನು ಪೂರೈಸುವ ಕೈಗಾರಿಕೆ, ಕಂಪೆನಿ, ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದೂರವಾಣಿ ಮತ್ತು ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ತಮ್ಮ ಸಂಸ್ಥೆ ನೀಡಿರುವ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ಆಸ್ಪತ್ರೆಗಳು, ನರ್ಸಿಂಗ್ ಹೋಂ, ಚಿಕಿತ್ಸಾಲಯಗಳು, ಪ್ರಯೋಗಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಔಷಧ ಮತ್ತು ಸಂಶೋಧನಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಮತ್ತು ಮೂಲ ಸೌಕರ್ಯಕ್ಕೆ ಸಂಬಂ ಧಿಸಿದ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ, ದಾದಿಯರು, ಲ್ಯಾಬ್ ತಂತ್ರಜ್ಞರು ಆಸ್ಪತ್ರೆಗಳ ಪೂರಕ ಸೇವೆ ಸಿಬ್ಬಂದಿ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರೋಗಿಗಳು ಮತ್ತು ಅವರ ಸಂಬಂಧಿಕರು ತುರ್ತು ಅಗತ್ಯವಿದ್ದ ಸಂದರ್ಭದಲ್ಲಿ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ. ಕೋವಿಡ್ ಲಸಿಕೆ ಪಡೆದುಕೊಳ್ಳುವವರು ದಾಖಲೆಗ ಳನ್ನು ಪ್ರದರ್ಶಿಸಿ ಸಂಚರಿಸಬಹುದಾಗಿದೆ ಎಂದಿದ್ದಾರೆ.
ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಡೈರಿ, ಹಾಲಿನ ಕೇಂದ್ರಗಳು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರೆಸ್ಟೋರೆಂಟ್ ಮತ್ತು ಹೊಟೇಲ್‌ಗಳಲ್ಲಿ ಪಾರ್ಸಲ್‌ಗೆ ಅವಕಾಶ ನೀಡಲಾಗಿದೆ. ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ರೈಲು ನಿಲ್ದಾಣಕ್ಕೆ ಖಾಸಗಿ ವಾಹನದಲ್ಲಿ ಪ್ರಯಾಣ ಮಾಡುವರು ಸೂಕ್ತ ದಾಖಲೆಗಳನ್ನು, ಟಿಕೆಟ್‌ಗಳನ್ನು ಪ್ರದರ್ಶಿಸಬೇಕು. ಉಳಿದಂತೆ ಮದುವೆ ಸಮಾರಂಭ, ಅಂತ್ಯಕ್ರಿಯೆ ಸೇರಿದಂತೆ ಇತರೆ ನಿರ್ಬಂಧಗಳು ಎಂದಿನಂತೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.