ಚಿಕ್ಕಮಗಳೂರು: ಕೊರೊನಾ ಮೂರನೇ ಅಲೆ ತಡೆಯಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬುಧವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೊರೊನಾ ಮೂರನೇ ಅಲೆ ಮುಂಜಾಗ್ರತೆಯಾಗಿ ಕೈಗೊಂಡ ಕ್ರಮ ಮತ್ತು ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕುಗಳಲ್ಲಿ ಕೊರೊನಾ ಪಾಸಿಟಿವ್ ದರ ಅ ಧಿಕ ವಾಗಿದ್ದು ಕೊರೊನಾ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು. ತಾಲೂಕು ಕೇಂದ್ರಗಳಲ್ಲಿ ಪಾಸಿಟಿವ್ ದರ ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಹೊಟೇಲ್, ರೆಸ್ಟೋರೆಂಟ್, ಮಾಲ್, ಸೂಪರ್ ಮಾರ್ಕೆಟ್, ಧಾರ್ಮಿಕ ಸ್ಥಳ ಹೆಚ್ಚು ಜನ ಸೇರುವಂತಹ ವಲಯಗಳನ್ನು ಜಿಲ್ಲೆಯಲ್ಲಿ ಪಾಸಿಟಿವ್ ದರ ಶೇ.5ರಷ್ಟು ಕಡಿಮೆಯಾಗುವ ವರೆಗೂ ತೆರೆಯಲು ಅವಕಾಶ ನೀಡುವುದಿಲ್ಲ, ರಿಕರು ಮತ್ತು ಯಂತ್ರಗಳ ದುರಸ್ತಿ ಅಂಗಡಿ ಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ನೂತನವಾಗಿ ಆರಂಭವಾಗುತ್ತಿರುವ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧ ನಾ ಸಂಸ್ಥೆಯ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಯು ಪ್ರಗತಿ ಹಂತದಲ್ಲಿರುವುದರಿಂದ ವೈದ್ಯಕೀಯ ಕಾಲೇಜ ಪ್ರಾರಂಭ ಮಾಡಲು ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದು ಹೇಳಿದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಜಿಲ್ಲೆಯಲ್ಲಿ ಲಸಿಕೆ ನೀಡುವಲ್ಲಿ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು. ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬೇಕು. ಸಮಸ್ಯೆಗಳಿದ್ದರೆ ತಿಳಿಸುವಂತೆ ಅಧಿ ಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಿದ್ದರೂ ಕೂಡ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸದಿದ್ದಲ್ಲಿ ದಂಡ ವಿಧಿ ಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಎಂ.ಎಚ್. ಅಕ್ಷಯ್ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಮೂರನೇ ಅಲೆಗೆ ಸಂಬಂ ಧಿಸಿದಂತೆ ತಜ್ಞರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದು, ಬೇಡಿಕೆಗಳಿದ್ದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿ ಕಾರಿ ಎಸ್. ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್ ಇತರರು ಇದ್ದರು.