Advertisement
ಇಲ್ಲದಿದ್ದರೆ ಅನುದಾನ ಸರ್ಕಾರಕ್ಕೆ ಹಿಂದುರುಗಿ ಹೋಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖೀಕ ಖಾತೆ ಸಚಿವ ನಾರಾಯಣ ಗೌಡ ಅ ಧಿಕಾರಿಗಳಿಗೆ ತಿಳಿಸಿದರು.
Related Articles
Advertisement
ಮೂಡಿಗೆರೆ ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1.20 ಕೋಟಿ ರೂ. ಮಂಜೂರಾಗಿದ್ದು, 40 ಲಕ್ಷ ರೂ. ಬಿಡು ಗಡೆಯಾಗಿದೆ. ಕಡೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 31ಲಕ್ಷ ರೂ. ಮಂಜೂರಾಗಿದ್ದು, 20 ಲಕ್ಷ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. 2020-21ನೇ ಸಾಲಿನಲ್ಲಿ ಕ್ರೀಡಾ ಇಲಾಖೆಯಿಂದ ನಗರದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ 150 ಕೋಟಿ ರೂ. ಹಾಗೂ ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ 50ಲಕ್ಷ ರೂ. ಬಿಡುಗಡೆಯಾಗಿದೆ.
ಅಯ್ಯನಕೆರೆಯಲ್ಲಿ ಜಲಸಾಹಸ ಕ್ರೀಡೆಗಳ ಅಭಿವೃದ್ಧಿಗೆ 4.50 ಕೋಟಿ. ರೂ. ಅನುದಾನ ಮಂಜೂರಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಶಾಸಕ ಸಿ.ಟಿ. ರವಿ ಮಾತನಾಡಿ, ಜಿಲ್ಲಾ ಶತಮಾನೋತ್ಸವನ ಕ್ರೀಡಾಂಗಣದಲ್ಲಿರುವ ಸಿಂಥಟಿಕ್ ಟ್ರಾÂಕ್ ಸಂಪೂರ್ಣವಾಗಿ ಹಾಳಾಗಿದೆ. ಈ ಕಾರಣಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಬಳಿ ಚರ್ಚಿಸಿ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರಿಂದ 7 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.
ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಮೂಡಿಗೆರೆ ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1.20 ಕೋಟಿ ರೂ. ಮಂಜೂರಾಗಿದ್ದು, ಕ್ರೀಡಾಂಗಣದಲ್ಲಿ ಓಪನ್ ಥಿಯೇಟರ್ ನಿರ್ಮಾಣಕ್ಕೆ ಹೆಚ್ಚುವರಿ 50 ಲಕ್ಷ ರೂ. ವೆಚ್ಚದಲ್ಲಿ ಕ್ರಿಯಾಯೋಜನೆಗೆ ಸಲ್ಲಿಸಲು ಸೂಚಿಸಿದ್ದು, ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿಲ್ಲ ಎಂದರು. ಮಧ್ಯ ಪ್ರವೇಶಿಸಿದ ಸಚಿವ ನಾರಾಯಣ ಗೌಡ 1.20 ಕೋಟಿ ರೂ. ಕ್ರಿಯಾ ಯೋಜನೆಗೆ ಹೆಚ್ಚುವರಿ 50 ಲಕ್ಷ ರೂ. ಅನುದಾನ ಸೇರಿಸಿ ಪರಿಷ್ಕೃತ ಕ್ರಿಯಾಯೋಜನೆ ಸಲ್ಲಿಸಬೇಕೆಂದು ಸಂಬಂ ಧಿಸಿದ ಇಂಜಿನಿಯರ್‌ಗೆ ಸೂಚಿಸಿದರು.
ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಯೋಜನೆ ಅನುಷ್ಠಾನಕ್ಕೆ ಅರಣ್ಯ ಇಲಾಖೆಯಿಂದ ಸಮಸ್ಯೆ ಇತ್ತು. ಈ ಸಮಸ್ಯೆ ಪರಿಹಾರಕ್ಕೆ ಇಲಾಖಾಧಿಕಾರಿಗಳೊಂದಿಗೆ ಮಾತನಾಡಿದ್ದು, ಅರಣ್ಯ ಇಲಾಖೆಯ ಜಾಗದ ಬಳಕೆ ಹಿನ್ನೆಲೆಯಲ್ಲಿ 37 ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯೋಜನೆ ಅನುಷ್ಠಾನಕ್ಕಿದ್ದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.
ಸಚಿವ ನಾರಾಯಣ ಗೌಡ ಮಾತನಾಡಿ, ಖರ್ಚಾಗದೇ ಉಳಿದಿರುವ ಅನುದಾನದಲ್ಲಿ ಜಿಲ್ಲೆಯಲ್ಲಿ ಅಗತ್ಯ ಇರುವ ಯೋಜನೆಗಳ ಅನುಷ್ಠಾನಕ್ಕೆ ಶೀಘ್ರ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ವಿಧಾನ ಪರಿಷತ್ ಉಪಾಧ್ಯಕ್ಷ ಎಂ.ಕೆ. ಪ್ರಾಣೇಶ್, ಕಡೂರು ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್, ಜಿಪಂ ಸಿಇಒ ಎಸ್. ಪೂವಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಇದ್ದರು.