ಚಿಕ್ಕಮಗಳೂರು: ದೇಶದಲ್ಲಿ ಕೈಗಾರಿಕೆ ಯೋಜನೆಗಳಿಗೆ ಅಡಿಪಾಯ ಹಾಕಿದವರಲ್ಲಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಒಬ್ಬರು ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಆಯೋಜಿಸಿದ್ದ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೆಹರು ಸಚಿವ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಡಾ|ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ದೇಶದಲ್ಲಿ ಒಂದು ಸಂವಿಧಾನ, ಒಂದೇ ರಾಷ್ಟ್ರಧ್ವಜ ಇರಬೇಕು ಎಂದು ಬಲವಾಗಿ ಪ್ರತಿಪಾದಿಸಿದ್ದರು.
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ವಿರೋ ಧಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದರು.
ಮುಖರ್ಜಿ ಅವರು ದೇಶದ ಏಕೀಕರಣಕ್ಕಾಗಿ ಮಹತ್ವದ ನಿಲುವನ್ನು ಹೊಂದಿದ್ದರು. ಅವರ ಬಲಿದಾನದ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ದೇಶದ ಅಖಂಡತೆಯನ್ನು ಎತ್ತಿಹಿಡಿದಿದ್ದಾರೆ ಎಂದು ಹೇಳಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಿ.ಆನಂದ್, ಜಿಪಂ ಮಾಜಿ ಉಪಾಧ್ಯಕ್ಷ ವಿಜಯ್ ಕುಮಾರ್, ಮಾಜಿ ಸದಸ್ಯೆ ಜೆಸಿಂತಾ ಅನಿಲ್‌ಕುಮಾರ್, ಕನಕರಾಜ್ ಅರಸ್, ಲಕ್ಷ್ಮಣ್ ನಾಯ್ಕ, ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ಇದ್ದರು.