Advertisement
ಕೋವಿಡ್ ಸೋಂಕು ಉಲ್ಬಣಗೊಂಡ ಬಳಿಕ ಜಿಲ್ಲೆಯ ಪ್ರವಾಸಿ ತಾಣ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಯಾರೂ ಬರದಂತೆ ಜಿಲ್ಲಾಡಳಿತ ನಿರ್ಬಂಧ ವಿ ಧಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ದೇವಸ್ಥಾನಗಳು ಮತ್ತು ಪ್ರೇಕ್ಷಣೀಯ ಸ್ಥಳಗಳು ಬಿಕೋ ಎನ್ನುತ್ತಿದ್ದವು.
Related Articles
Advertisement
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹಾಗೂ ಶೃಂಗೇರಿ ಶಾರದಾ ಪೀಠ ಸೇರಿದಂತೆ ಇತರೆ ಧಾರ್ಮಿಕ ಕ್ಷೇತ್ರಗಳಿಗೂ ಶನಿವಾರ ಮತ್ತು ಭಾನುವಾರ ಭಕ್ತರ ದಂಡು ಹರಿದು ಬಂದಿದೆ.
ಚಾರ್ಮಾಡಿ ಘಾಟಿಯಲ್ಲಿ ಜಲಕನ್ಯೆಯರ ನರ್ತನ: 2-3 ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು, ಪ್ರವಾಸಿಗರು ಜಿಲ್ಲೆಯ ಜಲಪಾತಗಳಿಗೆ ಮುಗಿ ಬೀಳುತ್ತಿದ್ದಾರೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಸಾಗುವ ಮಾರ್ಗದ ಅಲ್ಲಲ್ಲಿ ಜನಕನ್ಯೆಯರು ನರ್ತಿಸುತ್ತಿದ್ದು ಈ ಪರಿಸರವನ್ನು ವೀಕ್ಷಿಸಲು ಜನ ಮುಗಿ ಬಿದ್ದಿದ್ದಾರೆ. ಜಲಪಾತಗಳನ್ನು ಕಣ್ತುಂಬಿಕೊಂಡು ಮೋಜು-ಮಸ್ತಿ ಮಾಡುತ್ತಿದ್ದಾರೆ.
ಹರಿದು ಬಂದ ಪ್ರವಾಸಿಗರು, ಸ್ಥಳಿಯರಲ್ಲಿ ಕೋವಿಡ್ ಭೀತಿ: ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆ ಕೋವಿಡ್ ಪಾಸಿಟಿವಿಟಿ ರೇಟ್‌ನಲ್ಲಿ ರಾಜ್ಯದಲ್ಲೇ ಅಗ್ರಸ್ಥಾನಕ್ಕೆ ಏರಿತ್ತು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯಸರ್ಕಾರ ಲಾಕ್‌ಡೌನ್ ನಿರ್ಬಂಧಗಳನ್ನು ಜಿಲ್ಲೆಯಲ್ಲಿ ಸಡಲಿಕೆ ಮಾಡಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ಹರಿದು ಬಂದಿದ್ದು, ಮತ್ತೆ ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಸುವ ಭೀತಿಯೂ ಸ್ಥಳೀಯರಲ್ಲಿ ಎದುರಾಗಿದೆ.
ಬಹುತೇಕ ಲಾಡ್ಜ್ ಗಳು, ಹೋಮ್ ಸ್ಟೇ, ರೆಸಾರ್ಟ್‌ಗಳಲ್ಲಿ ದೂರದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಹೊರರಾಜ್ಯದಿಂದ ಜನರು ಬಂದು ತಂಗುತ್ತಿರುವುದು ಸ್ಥಳೀಯರಲ್ಲಿ ಕೋವಿಡ್ ಭೀತಿಯನ್ನು ಉಂಟು ಮಾಡಿದೆ.
ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ ಪ್ರವಾಸಿಗರು: ಪ್ರವಾಸಿ ತಾಣಗಳಿಗೆ ಬೇಟಿನೀಡುವ ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್ ನಿಯಮ ಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆದರೆ, ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಪ್ರವಾಸಿಗರು ಸಾಮಾಜಿಕ ಅಂತರ ಉಲ್ಲಂಘಿಸಿ ಮಾಸ್ಕ್ ಧರಿಸದೆ ಮೈ ಮರೆತು ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಿದರು.
ಟ್ರಾಫಿಕ್ ಜಾಮ್: ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಶನಿವಾರ 1,023 ಕಾರು, 425 ಬೈಕ್, 46 ಟಿಟಿ-ಮಿನಿ ಬಸ್‌ನಲ್ಲಿ ಸಾವಿರಾರು ಪ್ರವಾಸಿಗರು ಬಂದಿದ್ದು ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಭಾನುವಾರ ಬೆಳಗ್ಗೆ 6ಗಂಟೆಯಿಂದ ಸಂಜೆವರೆಗೂ 496 ಬೈಕ್, 1,172 ಕಾರು, 56 ಟಿಟಿ ವಾಹನ ಮತ್ತು ಮಿನಿ ಬಸ್‌ಗಳಲ್ಲಿ 5 5 ರಿಂದ 6ಸಾವಿಕರಕ್ಕೂ ಹೆಚ್ಚು ಜನರು ಮುಳ್ಳಯ್ಯನಗಿರಿ ಮಾರ್ಗವಾಗಿ ಸಂಚರಿಸಿದ್ದು ಮಾರ್ಗದುದ್ದಕ್ಕೂ ಟ್ರಾμಕ್ ಜಾಮ್ ಉಂಟಾಗಿತು.