ಚಿಕ್ಕಮಗಳೂರು: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ವಿದ್ಯಾರ್ಥಿಗಳನ್ನು ಕಾಡುತ್ತಿತ್ತು. ಸರ್ಕಾರ ಜು.19 ಮತ್ತು ಜು.22 ರಂದು ಪರೀಕ್ಷೆ ನಡೆಸಲು ಸಕಲ ಸಿದ್ಧತೆ ನಡೆಸಿದ್ದು ಸೋಮವಾರ (ಇಂದು) ಜಿಲ್ಲೆಯ 85 ಪರೀಕ್ಷಾ ಕೇಂದ್ರಗಳಲ್ಲಿ 14,116 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಚಿಕ್ಕಮಗಳೂರು ಶೈಕ್ಷಣಿಕ ವಲಯದಲ್ಲಿ 19 ಪರೀಕ್ಷಾ ಕೇಂದ್ರ, ಕಡೂರು ವಲಯದಲ್ಲಿ 16 ಪರೀಕ್ಷಾ ಕೇಂದ್ರ, ಕೊಪ್ಪ ವಲಯದಲ್ಲಿ 7 ಪರೀಕ್ಷಾ ಕೇಂದ್ರ, ನರಸಿಂಹರಾಜಪುರ ವಲಯದಲ್ಲಿ 6 ಪರೀಕ್ಷಾ ಕೇಂದ್ರ, ಶೃಂಗೇರಿ ವಲಯದಲ್ಲಿ 3 ಪರೀಕ್ಷಾ ಕೇಂದ್ರ, ಮೂಡಿಗೆರೆ ವಲಯದಲ್ಲಿ 9 ಪರೀಕ್ಷಾ ಕೇಂದ್ರ, ತರೀಕೆರೆ ವಲಯದಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಒಂದು ಡೆಸ್ಕ್ಗೆ ಓರ್ವ ವಿದ್ಯಾರ್ಥಿ ಕುಳಿತು ಪರೀಕ್ಷೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿ ಸೇರಿದಂತೆ ಕೇಂದ್ರದ ಸುತ್ತಮುತ್ತ ಸ್ಯಾನಿಟೈಸರ್ ಸಿಂಪಡಣೆ ಮಾಡಲಾ ಗಿದೆ. ಪ್ರತೀ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿದ್ದು ಪರೀಕ್ಷೆ ಬರೆಯಲು ಬರುವ ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕಾÂನಿಂಗ್‌ಗೆ ಒಳಪಡಿಸಿ ಮಾಸ್ಕ್ ಧರಿಸಿದ ನಂತರ ಪರೀಕ್ಷಾ ಕೇಂದ್ರದ ಒಳಪ್ರವೇಶಕ್ಕೆ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. 150-200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ತಪಾಸಣೆಗೆ 2 ಕೌಂಟರ್‌ಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರ ಸಮೀಪದ ಆರೋಗ್ಯ ಕೇಂದ್ರದಿಂದ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕೋವಿಡ್ ಸೋಂಕಿಗೆ ಒಳಗಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂ ದಿ ಕೊಠಡಿ ಮೇಲ್ವಿಚಾರಣೆ ಮಾಡಲಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಉಚಿತ ಪ್ರಯಾಣಕ್ಕೆ ಅವಕಾಶ ಮಾಡಲಾಗಿದೆ. ಸಾರಿಗೆ ವ್ಯವಸ್ಥೆ ಹೊಂದಿಲ್ಲದ ಗ್ರಾಮಗಳಿಂದ ವಿದ್ಯಾರ್ಥಿಗಳನ್ನು ಕರೆತರುವಂತೆ ಪೋಷಕರಿಗೆ ತಿಳಿಸಲಾಗಿದೆ.