Advertisement

ಶಾಂತಿಯುತ ಬಕ್ರೀದ್‌ಗೆ ಡಿಸಿ ಕರೆ

06:12 PM Jul 20, 2021 | Team Udayavani |

ಚಿಕ್ಕಮಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಬಕ್ರೀದ್‌ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್‌ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ರಾಜ್ಯದಲ್ಲೆಡೆ ಕೋವಿಡ್‌ ಆನ್‌ಲಾಕ್‌ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸಹ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆ ಅವಶ್ಯವಾಗಿದೆ. ಮುಂದಿನ ದಿನಗಳಲ್ಲಿ ಮೂರನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾಮಾ ಜಿಕ ಅಂತರ ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಬಕ್ರೀದ್‌ ಹಬ್ಬವನ್ನು ಆಚರಿಸುವಂತೆ ತಿಳಿಸಿದರು. ಪ್ರಾರ್ಥನಾ ಮಂದಿರ ಹಾಗೂ ಮಸೀದಿಗಳಲ್ಲಿ ಶೇ.50ರಷ್ಟು ಜನರು ಭಾಗವಹಿಸಲು ಅವಕಾಶ ಕಲ್ಪಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷ ವಯಸ್ಸಿನ ಒಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡುವಂತೆ ತಿಳಿಸಿದ ಅವರು, ಕಾನೂನು ಉಲ್ಲಂ ಘನೆಯಾಗದಂತೆ ಹಬ್ಬವನ್ನು ಆಚರಿಸಿ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌. ಅಕ್ಷಯ್‌ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಉಲ್ಲಂಘನೆಯಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾ  ಧಿಕಾರಿ ಬಿ.ಆರ್‌. ರೂಪ, ಉಪ ವಿಭಾಗಾಧಿಕಾರಿ ಎಚ್‌. ಎಲ್‌. ನಾಗರಾಜ್‌ ಮತ್ತು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌ ಇತರೆ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next