ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ 9,412 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು ಅಷ್ಟೂ ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ ಎಂದು ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಚ್. ರಾಜಪ್ಪ ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರಲಿಲ್ಲ, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದ ಶೇ.45ರಷ್ಟು ಪಿಯುಸಿ ಶೇ.45ರಷ್ಟು, ಆಂತರಿಕ ಮೌಲ್ಯಮಾಪನ ಶೇ.10 ಹಾಗೂ ಶೇ.5ರಷ್ಟು ಗ್ರೇಸ್ ಮಾಕ್ Õì ಆಧಾರದ ಮೇಲೆ ಪಪೂ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 9,412 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ ಎಂದರು.
ಕಲಾ ವಿಭಾಗದಲ್ಲಿ ಗಂಡು ಮಕ್ಕಳು 1,671 ಹಾಗೂ ಹೆಣ್ಣುಮಕ್ಕಳು 1591 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3,262 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,719 ಗಂಡು ಮಕ್ಕಳು, 1,802 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 3,521 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿ ಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ 1,157 ವಿದ್ಯಾರ್ಥಿಗಳು ಹಾಗೂ 1,472 ವಿದ್ಯಾರ್ಥಿನಿಯರು ಸೇರಿದಂತೆ 2,629 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದರು.
ಇವರಲ್ಲಿ ಮೊದಲ ಬಾರಿಗೆ 8,774 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡರು. 638 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳು 7,062 ಹಾಗೂ ಗ್ರಾಮೀಣ 2,350 ಪರೀಕ್ಷೆ ನೋಂದಾಯಿಸಿಕೊಂಡಿದ್ದರು ಎಂದ ಅವರು, ಕನ್ನಡ ಮಾಧ್ಯಮ 4,561 ವಿದ್ಯಾರ್ಥಿಗಳು ಮತ್ತು 4,851 ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.
ಹಿಂದಿನ ವರ್ಷ ದ್ವಿತೀಯ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ ಯಾವ ಸ್ಥಾನ ಪಡೆದುಕೊಂಡಿದೆ. ಎಷ್ಟು ವಿದ್ಯಾರ್ಥಿಗಳು ಡಿಸ್ಟಿಕ್ಷನ್, ಫಸ್ಟ್‌ಕ್ಲಾಸ್, ಸೆಕೆಂಡ್ ಕ್ಲಾಸ್ ಪಡೆದುಕೊಂಡಿದ್ದಾರೆ ಎಂಬುದು ಬುಧವಾರ ಅಧಿಕೃತವಾಗಿ ತಿಳಿದು ಬರಲಿದೆ.