Advertisement

ಕೋವಿಡ್‌ ತಡೆಗೆ ಕಟ್ಟುನಿಟ್ಟಿನ ಕ್ರಮ:ಡಿಸಿ

06:34 PM Aug 03, 2021 | Team Udayavani |

ಚಿಕ್ಕಮಗಳೂರು: ನೆರೆಯ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಬರುವ ವಾಹನಗಳನ್ನು ಕಡ್ಡಾಯವಾಗಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗೆ ಒಳಪಡಿಸಲಾಗುವುದು. ಆರ್‌ಟಿಪಿಸಿಆರ್‌ ವರದಿ ಕಡ್ಡಾಯವಾಗಿ ಇರಬೇಕು. ಇಲ್ಲದಿದ್ದರೆ ಜಿಲ್ಲೆ ಪ್ರವೇಶಕ್ಕೆ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ತಿಳಿಸಿದರು.

Advertisement

ಸೋಮವಾರ ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿ  ಸಲಾಗಿದೆ. ನಿರ್ದಿಷ್ಟ ವಾಹನಗಳು ಮತ್ತು ನಿಗ ದಿತ ಸಮಯದ ವರೆಗೆ ಮಾತ್ರ ಪ್ರವಾಸಿ ತಾಣಗಳಲ್ಲಿ ಇರಲು ಅವಕಾಶ ನೀಡಲಾಗಿದೆ. ನಿಗ ದಿತ ಪ್ರವಾಸಿ ತಾಣಕ್ಕೆ 300 ವಾಹನಗಳಿಗೆ ಮಾತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಜಿಲ್ಲೆಯ ಹೋಂ ಸ್ಟೇ ಮತ್ತು ರೆಸಾರ್ಟ್‌, ಲಾಡ್ಜ್ಗಳಿಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಇದ್ದಲ್ಲಿ ಅವರಿಗೂ ಸಹ ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿ ಪಾಲನೆ ಮಾಡಬೇಕು ಎಂದು ಈಗಾಗಲೇ ಸೂಚಿಸಲಾಗಿದೆ ಎಂದರು.

ನರಸಿಂಹರಾಜಪುರ, ಕೊಪ್ಪ ಭಾಗದಲ್ಲಿ ಕೇರಳ ನಂಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿದೆ. ಈ ಭಾಗದಲ್ಲಿ ಕಂಡುಬರುವ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸುವಂತೆ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನರಸಿಂಹರಾಜಪುರ ಮತ್ತು ಕೊಪ್ಪ ಹೊರತುಪಡಿಸಿದರೆ ಬೇರೆ ತಾಲೂಕುಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೇರಳ, ದಕ್ಷಿಣ ಕನ್ನಡ, ಉಡುಪಿ ಭಾಗದಿಂದ ಹೆಚ್ಚಿನ ಜನರು ಬರುವ ಕಾರಣ ಸೋಂಕು ಹರಡುವ ಪ್ರಮಾಣ ಹೆಚ್ಚುತ್ತಿದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಸೋಂಕು ಕಡಿಮೆ ಇರುವ ತಾಲೂಕುಗಳಲ್ಲಿ ಮೈಕ್ರೋ ಕಂಟೈನ್ಮೆಂಟ್‌ ಹಾಗೂ ಕಂಟೈನ್ಮೆಂಟ್‌ ಝೋನ್‌ ಮಾಡಲಾಗುವುದು. ಸೋಂಕಿತರು ಕಂಡುಬರುವ ಮನೆಗಳಿಗೆ ಸ್ಟಿಕ್ಕರ್‌ ಅಂಟಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದ್ದು, 5ರಿಂದ 10 ಸೋಂಕು ಇರುವ 10 ಗ್ರಾಮಗಳು ಮತ್ತು 15 ಸೋಂಕಿತರಿರುವ 4 ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು, ಸಣ್ಣ ಪ್ರದೇಶದಲ್ಲಿ ಅತೀ ಹೆಚ್ಚು ಸೋಂಕಿತರು ಕಂಡು ಬಂದರೆ ಆ ಪ್ರದೇಶವನ್ನು ಕಂಟೈನ್ಮೆಂಟ್‌ ಝೋನ್‌ ಮಾಡುವ ನಿಟ್ಟಿನಲ್ಲಿ ಚಿಂತಿಸಲಾಗಿದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next