Advertisement

ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧ

06:53 PM Aug 19, 2021 | Team Udayavani |

ಚಿಕ್ಕಮಗಳೂರು: ರೈತರು ಸ್ವಾವಲಂಬಿಗಳಾಗಬೇಕು. ಕೃಷಿ ಉತ್ಪಾದನೆ ಹೆಚ್ಚಿಸಿ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ 6 ವರ್ಷಗಳಿಂದ ರೈತಪರವಾದ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದಲ್ಲಿ ತನಗೆ ಕೃಷಿ ಖಾತೆಯಂತಹ ಮಹತ್ವದ ಜವಾಬ್ದಾರಿಯನ್ನು ನೀಡಿದ್ದು, ರೈತರು ಮತ್ತು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ಪ್ರಧಾನಮಂತ್ರಿ ಮೋದಿಯವರು ಯುಪಿಎ ಸರ್ಕಾರದ ಅವಧಿ ಯಲ್ಲಿದ್ದ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಕೃಷಿ ಕ್ಷೇತ್ರಕ್ಕೆ ನೀಡಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿ ಸಂಶೋಧನೆ, ಬಿತ್ತನೆ ಬೀಜಗಳು, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿದೆ. ಆತ್ಮನಿರ್ಭರ, ಕಿಸಾನ್‌ ಸಮ್ಮಾನ್‌, ಫಸಲ್‌ಬಿಮಾ, ಕೃಷಿ ಸಿಂಚಾಯಿ ಸೇರಿದಂತೆ ಅನೇಕ ಯೋಜನೆ ಜಾರಿಗೊಳಿಸಿದ್ದು ರೈತರಿಗೆ ಅನುಕೂಲವಾಗಲಿದೆ ಎಂದರು. ದೇಶಾದ್ಯಂತ ಶೇ.85ರಷ್ಟು ಸಣ್ಣ ಮತ್ತು ಮಧ್ಯಮ ರೈತರು ಇದ್ದು ಕಿಸಾನ್‌ ಸಮ್ಮಾನ್‌ ಯೋಜನೆಯಡಿ 21ಕೋಟಿ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ.

ರೈತರ ಬೆಳೆಹಾನಿ, ವಿಮೆಗೆ ಸಂಬಂ ಧಿಸಿದಂತೆ ಬೆಳೆ ಸಮೀಕ್ಷೆಗೆ ರೈತರಿಗೆ ಅವಕಾಶ ನೀಡಿದ್ದು, ಕೋವಿಡ್‌ ಸಂದರ್ಭದಲ್ಲೂ ಕೃಷಿಕ್ಷೇತ್ರದಲ್ಲಿ ಶೇ.20ರಷ್ಟು ಜಿಡಿಪಿ ಹೆಚ್ಚಿದೆ ಎಂದು ಹೇಳಿದರು. ಆಹಾರ ಪದಾರ್ಥಗಳ ರμ¤ನಲ್ಲಿ ಭಾರತ ದೇಶ 9ನೇ ಸ್ಥಾನದಲ್ಲಿದೆ. ಸಣ್ಣ ಮತ್ತು ಮಧ್ಯಮ ಕಾμ ಬೆಳೆಗಾರರಿಗೆ ಹನಿ ನೀರಾವರಿಗೆ ಸಬ್ಸಿಡಿ ದರದಲ್ಲಿ ನೀಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ವಿದೇಶಗಳಿಗೆ ರಫ್ತು ಮಾಡಲು ಮುಂದಾಗಲಾಗುವುದು. ಕೃಷಿ ಉತ್ಪಾದಕ ಸಂಘ ಸಂಸ್ಥೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಆಹಾರ ಸಂಸ್ಕರಣೆ ಘಟಕ, ಶೀತಸಂಗ್ರಹ ಘಟಕ ಸೇರಿದಂತೆ ಸಣ್ಣ ಮತ್ತು ಮಧ್ಯಮ ರೈತರಿಗೆ ಸಾಲಸೌಲಭ್ಯದ ಮೂಲಕ ಕೃಷಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಕ್ಕೆ ಚಿಂತನೆ ನಡೆದಿದೆ.

ಹೊಸಕೋಟೆಯಲ್ಲಿ ಸ್ಪೆ çಸ್‌ ಪಾರ್ಕ್‌ ನಿರ್ಮಾಣ ಮಾಡಲು ಜಾಗ ಮೀಸಲಿರಿಸಲಾಗಿದೆ. ರೈತರ ಮತ್ತು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ತರೀಕೆರೆ ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಜಿಲ್ಲೆ ಮಲೆನಾಡು ಬಯಲುಸೀಮೆ ಒಳಗೊಂಡಂತೆ ಈರುಳ್ಳಿ, ಆಲೂಗಡ್ಡೆ, ಕಾμ, ಅಡಕೆ, ತೆಂಗು ಬೆಳೆಯುವ ರೈತರು, ಬೆಳೆ ಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಜಿಲ್ಲೆಗೆ ವಿಶೇಷ ಆದ್ಯತೆ ನೀಡಬೇಕು. ತರೀಕೆರೆಯ ಬಾವಿಕೆರೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಕ್ಕೆ ಚಿಂತನೆ ನಡೆಸಿದ್ದು, ಆದಷ್ಟು ಬೇಗ ಅನುಮೋದನೆ ದೊರಕಿಸಿ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.

Advertisement

ಬಿಜೆಪಿಯ ಮಹಿಳಾಮೋರ್ಚಾ, ಎಸ್‌ಸಿ. ಮೋರ್ಚಾ, ಒಳಗೊಂಡಂತೆ ವಿವಿಧ ಮೋರ್ಚಾದ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ನೂತನ ಕೃಷಿ ಸಚಿವರನ್ನು ಅಭಿನಂದಿಸಿ ಸನ್ಮಾನಿಸಿದರು. ವಿಧಾನಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸಮಾಜ ಕಲ್ಯಾ ಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತರೀಕೆರೆ ಶಾಸಕ ಡಿ.ಎಸ್‌.ಸುರೇಶ್‌, ಕಡೂರು ಶಾಸಕ ಬೆಳ್ಳಿಪ್ರಕಾಶ್‌, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಎಂಎಲ್‌ಸಿ ತುಳಸಿ ಮುನಿರಾಜುಗೌಡ, ಚಿಕ್ಕಮಗಳೂರು ಕಾμಮಂಡಳಿ ಅಧ್ಯಕ್ಷ ಎಂ.ಎಸ್‌. ಭೋಜೆಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ನಗರ ಮಂಡಲ ಅಧ್ಯಕ್ಷ ಮಧುಕುಮಾರ್‌ ರಾಜ್‌ ಅರಸ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್‌, ಪ್ರೇಮ್‌ ಕುಮಾರ್‌, ದೀಪಕ್‌ ದೊಡ್ಡಯ್ಯ, ಸೀತಾರಾಮ ಭರಣ್ಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next