ಬಾಳೆಹೊನ್ನೂರು: ಮಹಿಳೆಯರು ಸಂಘ-ಸಂಸ್ಥೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮಾದರಿ ಸಮಾಜ ನಿರ್ಮಾಣ ಮಾಡಲು ಪ್ರಯತ್ನಿಸಬೇಕು ಎಂದು ಇನ್ನರ್‌ವೀಲ್ ಸಂಸ್ಥೆಯ ಜಿಲ್ಲಾ ಗೌವರ್ನರ್ ವಾರಿಜಾ ಜಗದೀಶ್ ಹೇಳಿದರು.
ಬಾಳೆಹೊನ್ನೂರು ಇನ್ನರ್‌ವೀಲ್ ಸಂಸ್ಥೆಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಸಂಸ್ಥೆಯು ಪಟ್ಟಣದ ಶ್ರೀ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಓದಿ : ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು
ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಬಾಳಿನಲ್ಲಿ ನೆಮ್ಮದಿ ಕಾಣಬಹುದು. ಅಲ್ಲದೆ ಇನ್ನರ್‌ವೀಲ್ ಸಂಸ್ಥೆಯ ಪ್ರತಿಯೊಬ್ಬ ಸದಸ್ಯರೂ ಕೂಡ ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕೆಂದರು. ಇನ್ನರ್‌ವೀಲ್ ಸಂಸ್ಥೆಯ ಅಧ್ಯಕ್ಷೆ ಸಿ.ಟಿ. ರೇವತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ಸ್ವಂತ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿರುವ ತಹಸೀನ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಇನ್ನರ್‌ವೀಲ್ ಕ್ಲಬ್ ಹಾಗೂ ಡಿಸ್ಟ್ರಿಕ್ಟ್ ಎಡಿಟರ್ ವೈಶಾಲಿ ಕುಡ್ವ ಅವರ ಸಹಯೋಗದಲ್ಲಿ ದ್ವಿಚಕ್ರ ವಾಹನ ನಿಲುಗಡೆ ನಾಮ ಫಲಕವನ್ನು ಅನಾವರಣಗೊಳಿಸಲಾಯಿತು.
ಬಿ.ಸಿ. ಗೀತಾ, ಬಾಳೆಹೊನ್ನೂರು ಠಾಣಾ ಧಿಕಾರಿ ನೀತು ಆರ್. ಗುಡೆ, ಇನ್ನರ್‌ವೀಲ್ ಸಂಸ್ಥೆಯ ಕಾರ್ಯದರ್ಶಿ ಕವಿತಾ ಕೇಶವ್, ಸುಪ್ರಿಯಾ, ಆಶಾ ಮಂಜೇಶ್, ಸಹನಾ, ವಿದ್ಯಾ ಪೈ, ನಿಶ್ಚಿತಾ ಹರ್ಷ, ವಿದ್ಯಾ ಶೆಟ್ಟಿ, ಜಾಹ್ನವಿ, ಮೇನಕಾ ಜಯಪ್ರಕಾಶ್ ಮತ್ತಿತರರು ಇದ್ದರು.
ಓದಿ : ರೈತರ ಹೋರಾಟ ಹತ್ತಿಕ್ಕುವ ತಂತ್ರ ಕೈಬಿಡಿ