Advertisement

30 ಠಾಣೆಗಳಲ್ಲಿ ತೆರೆದಮನೆ ಕಾರ್ಯಕ್ರಮ

05:48 PM Feb 21, 2021 | Team Udayavani |

ಚಿಕ್ಕಮಗಳೂರು: ಪೊಲೀಸ್‌ ವ್ಯವಸ್ಥೆ ಮೇಲೆ ಮಕ್ಕಳಲ್ಲಿ ನಂಬಿಕೆ ಮೂಡಿಸಲು ಜಿಲ್ಲೆಯ 30 ಠಾಣೆಗಳಲ್ಲಿ ತೆರೆದಮನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಚ್‌.ಎಂ. ಅಕ್ಷಯ್‌ ತಿಳಿಸಿದರು.

Advertisement

ಶನಿವಾರ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಸವನಹಳ್ಳಿ ಬಾಲಿಕಾ ಪ್ರೌಢಶಾಲಾ ಮಕ್ಕಳಿಗೆ ಪೊಲೀಸ್‌ ಠಾಣೆ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿ ನಂತರ ಅವರು ಮಾತನಾಡಿದರು.

ಮಕ್ಕಳು ಸಂಕಷ್ಟಕ್ಕೆ ಒಳಗಾಗಿದ್ದು ಅಥವಾ ಅಕ್ಕಪಕ್ಕದವರಿಗೆ ನೆರವು, ಕಾನೂನು ಉಲ್ಲಂಘನೆಯಾಗುತ್ತಿದ್ದರೆ ಠಾಣೆಗೆ ಆಗಮಿಸಿ ಮಕ್ಕಳು ದೂರು
ನೀಡಲು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನದಿಂದ ಅನೇಕ ಪ್ರಕರಣಗಳು ನಡೆಯುತ್ತಿದ್ದು, ತಂತ್ರಜ್ಞಾನದಿಂದ ಎಷ್ಟು ಉಪಯೋಗ ಇದೆಯೋ
ಅಷ್ಟೇ ಅಪಾಯವೂ ಇದೆ. ಆದ್ದರಿಂದ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ವೃತ್ತ ನಿರೀಕ್ಷಕ ಸಲೀಂ ಅಬ್ಟಾಸ್‌ ಮಾತನಾಡಿ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆದಾಗ ಭಯ ಪಡುವ ಅಗತ್ಯವಿಲ್ಲ. ಪೋಷಕರಾಗಲಿ,
ಶಿಕ್ಷಕರಾಗಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್‌ ಇಲಾಖೆ ಕಾರ್ಯನಿರ್ವಹಣೆ, ದಾಖಲೆ ನಿರ್ವಹಣೆ, ಒಳ್ಳೆಯ ಸ್ಪರ್ಶ, ಕೆಟ್ಟಸ್ಪರ್ಶ, 1098 ಸಹಾಯವಾಣಿ 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದರು. ಪೊಲೀಸ್‌ ಠಾಣೆ ಆವರಣದಲ್ಲಿ ಮಕ್ಕಳಿಗೆ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

Advertisement

ಓದಿ : ಕೃಷಿ ಪದವಿ ಕೋರ್ಸುಗಳ ಪ್ರವೇಶಾತಿಯಲ್ಲಿ ರೈತರ ಮಕ್ಕಳ ಮೀಸಲಾತಿ ಹೆಚ್ಚಳ: ಸಚಿವ ಬಿ.ಸಿ.ಪಾಟೀಲ್

Advertisement

Udayavani is now on Telegram. Click here to join our channel and stay updated with the latest news.

Next