Advertisement

ಕ್ಷಯ ರೋಗ ಮುಕ್ತ ಜಿಲ್ಲೆಯಾಗಲು ಶ್ರಮಿಸಿ

06:51 PM Mar 25, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯಾಗಿಸಲು ಆರೋಗ್ಯ ಇಲಾಖೆ ಶ್ರಮಿಸಬೇಕು ಎಂದು ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದರು.

Advertisement

ನಗರದ ತಾಲೂಕು ಪಂಚಾಯತ್‌ ಡಾ| ಬಿ.ಆರ್‌.ಅಂಬೇಡ್ಕರ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿ ನಿಮಿಷಕ್ಕೆ ಇಬ್ಬರು ಕ್ಷಯರೋಗದಿಂದ ಮೃತಪಡುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ.

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಂಡರೇ ಕ್ಷಯರೋಗದಿಂದ ಮುಕ್ತರಾಗಬಹುದು. ರೋಗ ಹರಡುವಿಕೆ, ರೋಗಲಕ್ಷಣದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಿದಾಗ ರೋಗ ತಡೆಗಟ್ಟಲು ಸಾಧ್ಯ ಎಂದರು. ವಿಶ್ವ ಆರೋಗ್ಯ ಸಂಸ್ಥೆ 2030ರೊಳಗೆ ಕ್ಷಯರೋಗ ನಿರ್ಮೂಲನೆ ಉದ್ದೇಶ ಹೊಂದಿದೆ. ಭಾರತದಲ್ಲಿ 2025 ರೊಳಗೆ ಕ್ಷಯರೋಗ ಮುಕ್ತ ದೇಶವಾಗಿಸಲು ಉದ್ದೇಶಿಸಲಾಗಿದೆ.

ಈ ಯೋಜನೆ ಯಶಸ್ವಿಯಾಗಲು ಆರೋಗ್ಯ ಇಲಾಖೆಯೊಂದಿಗೆ ಎಲ್ಲರು ಕೈ ಜೋಡಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ 875 ಮಂದಿ ಕ್ಷಯರೋಗಿಗಳು ಇದ್ದು, ರೋಗದಿಂದ ಸಂಪೂರ್ಣ ಗುಣಮುಖರಾಗುವರೆಗೂ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ರೋಗದಿಂದ ಮುಕ್ತರಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಕ್ಷಯರೋಗದ ಅರಿವಿನ ಕೊರತೆ ಇದೆ. ಈ ಹಿನ್ನೆಲೆ ಯಲ್ಲಿ ಭಿತ್ತಿಪತ್ರ, ಮಾಧ್ಯಮ ಕಲಾತಂಡಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ  ಕಾರಿ ಡಾ| ಉಮೇಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ 11 ಕಲಾ ತಂಡಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಂಪು ದೀಪ ಉರಿಸುವ ಮೂಲಕ ಕ್ಷಯರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ರೋಗ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು ಎಂದು ತಿಳಿಸಿದರು.

Advertisement

ಜಿಲ್ಲಾ ಸರ್ಜನ್‌ ಡಾ| ಮೋಹನ್‌ ಕುಮಾರ್‌ ಮಾತನಾಡಿ, ಸರ್ಕಾರದಿಂದ ಹಲವಾರು ಯೋಜನೆಗಳು ಹಾಗೂ ಲಸಿಕೆಗಳು ಲಭ್ಯವಿದ್ದು, ರೋಗಿಗಳು ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸದೆ ರೋಗವು ಸಂಪೂರ್ಣವಾಗಿ ಗುಣವಾಗುವವರೆಗೂ ಚಿಕಿತ್ಸೆ ಪಡೆಯುವ ಮೂಲಕ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾ ಧಿಕಾರಿ ಡಾ| ಟಿ.ಪಿ.ಬಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ಕ್ಷಯರೋಗದ ಕುರಿತು ಅರಿವು ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಶ್ರಮಿಸಿರುವ ಆರೋಗ್ಯ ಇಲಾಖೆಯ ಅ ಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಜಿಲ್ಲಾ ಆಯುಷ್‌ ಅ ಧಿಕಾರಿ ಡಾ| ಗೀತಾ, ತಾಲೂಕು ವೈದ್ಯಾಧಿ ಕಾರಿ ಡಾ| ಸೀಮಾ, ಜಿಲ್ಲಾ ಮಲೇರಿಯಾ ನಿಯಂತ್ರಣಾ ಧಿಕಾರಿ ಡಾ| ಹರೀಶ್‌ಬಾಬು, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ|ಮಂಜುನಾಥ್‌, ಹೆಚ್ಚುವರಿ ಜಿಲ್ಲಾ ಸರ್ಜನ್‌ ಡಾ| ನಾಗೇಂದ್ರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾ  ಧಿಕಾರಿ ಜಲಾಜಾಕ್ಷಿ ಉಪಸ್ಥಿತರಿದ್ದರು.

ಓದಿ : ಸಂಗೀತಕ್ಕಿದೆ  ಕಾಯಿಲೆ ವಾಸಿ ಶಕ್ತಿ  : ಹಿರೇಕಲ್ಮಠ ಶ್ರೀ

Advertisement

Udayavani is now on Telegram. Click here to join our channel and stay updated with the latest news.

Next