Advertisement

ಸೋಂಕು ತಡೆಗೆ ಸಾಮಾಜಿಕ ಅಂತರ ಕಾಪಾಡಿ

06:55 PM Apr 01, 2021 | Team Udayavani |

ಚಿಕ್ಕಮಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಖ ಗವಸು ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗುಂಪು ಸೇರಬಾರದು.

Advertisement

ಮದುವೆ, ಜನ್ಮದಿನಾಚರಣೆ, ಅಂತ್ಯಕ್ರಿಯೆ, ಧಾರ್ಮಿಕ ಮತ್ತು ರಾಜಕೀಯ ಸಮಾರಂಭಗಳಲ್ಲಿ ಗುಂಪು ಸೇರುವುದು ಸೀಮಿತಗೊಳಿಸಿ ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಿಲ್ಲಾದ್ಯಂತ ಧಾರ್ಮಿಕ ಸ್ಥಳ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಮೇಳ, ಸಭೆ ಸಮಾರಂಭ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಧಾರ್ಮಿಕ ಕಾರ್ಯಕ್ರಮ ಸಾಂಕೇತಿಕವಾಗಿ ಆಚರಿಸಲು ಸೂಚಿಸಿದ್ದು, ಧಾರ್ಮಿಕ ಹಬ್ಬಗಳಾದ ಯುಗಾದಿ, ಗುಡ್‌ ಫ್ತೈ ಡೇ ಸೇರಿದಂತೆ ಇತರೆ ಹಬ್ಬ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರಬಾರದು. ಹಾಗೂ ಪ್ರತಿಭಟನೆ, ಮುಷ್ಕರ ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಪ್ರದೇಶ, ಹೋಟೆಲ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಅಂಗಡಿ ಮುಂಗಟ್ಟು ಇತ್ಯಾದಿ ಸ್ಥಳಗಳಲ್ಲಿನ ಮಾಲೀಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು. ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಬೇಕು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next