Advertisement
ಚಿಕ್ಕಮಗಳೂರು: ಬೇಸಿಗೆ ಕಾಲ ಆರಂಭವಾಗಿದ್ದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕುಡಿಯುವ ನೀರಿನ ನಿರ್ವಹಣೆಗಾಗಿ ಪ್ರತಿ ತಾಲೂಕಿಗೆ 25 ಲಕ್ಷ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
Related Articles
Advertisement
ಕುಡಿಯುವ ನೀರಿಗೆ ಕ್ರಿಯಾಯೋಜನೆ: ಬೇಸಿಗೆಯ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಈ ವರ್ಷ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕೈಗೊಂಡಿರುವ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಚಿತವಾಗಿಯೇ ಪ್ರತೀ ತಾಲೂಕಿಗೆ ಕುಡಿಯುವ ನೀರಿನ ನಿರ್ವಹಣೆಗೆ 25 ಲಕ್ಷ ರೂ. ನೀಡಲಾಗಿದೆ.
265 ಗ್ರಾಮಗಳಲ್ಲಿ ಸಮಸ್ಯೆ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಅವುಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ 24 ಗ್ರಾಪಂನ 64ಜನವಸತಿ ಪ್ರದೇಶ, ಕಡೂರು ತಾಲೂಕಿನ 21 ಗ್ರಾಪಂನ 37ಜನವಸತಿ ಪ್ರದೇಶ, ಕೊಪ್ಪ ತಾಲೂಕಿನ 7 ಗ್ರಾಪಂನ 7 ಜನವಸತಿ ಪ್ರದೇಶ, ಮೂಡಿಗೆರೆ ತಾಲೂಕಿನ 19 ಗ್ರಾಪಂನ 27 ಜನವಸತಿ ಪ್ರದೇಶ, ನರಸಿಂಹರಾಜಪುರ ತಾಲೂಕಿನ 13 ಗ್ರಾಪಂನ 67 ಜನವಸತಿ ಪ್ರದೇಶ, ಶೃಂಗೇರಿ ತಾಲೂಕಿನ 7 ಗ್ರಾಪಂನ 13 ಜನವಸತಿ ಪ್ರದೇಶ ಹಾಗೂ ತರೀಕೆರೆ ತಾಲೂಕಿನ 21 ಗ್ರಾಪಂನ 50 ಜನವಸತಿ ಪ್ರದೇಶ ಸೇರಿದಂತೆ 265 ಜನವಸತಿ ಪ್ರದೇಶವನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ.
ಅನುದಾನಕ್ಕಾಗಿ ಪತ್ರ ವ್ಯವಹಾರ: ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕುಡಿಯುವ ನೀರಿನ ಸಮಸ್ಯೆ ಅಷ್ಟಾಗಿ ಉಲ½ಣಿಸಿರಲಿಲ್ಲ. ಈ ವರ್ಷವೂ ಕುಡಿಯುವ ನೀರಿನ ಸಮಸ್ಯೆ ಇದುವರೆಗೂ ಉಲ½ಣಿಸಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಏನಾದರೂ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಅನುದಾನ ನೀಡುವಂತೆ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ.
ಟ್ಯಾಂಕರ್ ಸೌಲಭ್ಯಕ್ಕೆ ಸಿದ್ಧತೆ: 2018ರಲ್ಲಿ ಜಿಲ್ಲೆಯ 85 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲಣವಾದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿತ್ತು. ಈ ವರ್ಷವೂ ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದುಕೊಳ್ಳುವ ಚಿಂತನೆ ನಡೆಸಿದ್ದು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಟಾಸ್ಕ್ಫೋರ್ಸ್ ಸಮಿತಿ: ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಆರ್‌ಡಿಪಿಆರ್ ಮತ್ತು ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಆರ್‌ಡಿಪಿಆರ್ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ತಾಪಂ ಸಿಇಒ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದರೆ, ಜಿಲ್ಲಾ ಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಜಿಪಂ ಸಿಇಒ, ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದೆ. ಆಯಾ ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.