ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಔಷ ಧ ದರವನ್ನು ಹೆಚ್ಚಿಸುವಂತಿಲ್ಲ. ಹೆಚ್ಚಿಸಿದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಶಾಸಕ ಸಿ.ಟಿ. ರವಿ ಸೂಚಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ಇತರೆ ಕಾಯಿಲೆಗಳಿಗೆ ಸಂಬಂ ಧಿಸಿದ ರೋಗಿಗಳನ್ನು ನಿರ್ಲಕ್ಷಿಸದೆ, ಪರ್ಯಾಯ ಮಾರ್ಗಗಳನ್ನು ರೂಪಿಸಬೇಕು. ಔಷ ಧ ದರಗಳನ್ನು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಈ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅ ಧಿಕಾರಿಗಳಿಗೆ ತಿಳಿಸಿದರು.
ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿ ಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. 24×7 ಹೆಲ್ಪ್ಲೈನ್ ಡೆಸ್ಕ್ಗಳನ್ನು ಸ್ಥಾಪಿಸಬೇಕು ಎಂದರು. ಮನೆಯಲ್ಲಿ ಕ್ವಾರಂಟೈನ್‌ನಲ್ಲಿರುವವರಿಗೆ ಸಹಾಯವಾಣಿ ಮೂಲಕ ಸಂಪರ್ಕಿಸಿ ಅವರಿಗೆ ಸಲಹೆಗಳನ್ನು ನೀಡುವುದರ ಜೊತೆಗೆ ಧೈರ್ಯ ತುಂಬಬೇಕು. ಇದರಿಂದ ಆಸ್ಪತ್ರೆಗಳ ಮೇಲೆ ಬೀಳುವ ಹೊರೆ ಕಡಿಮೆಯಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದರು. ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಜನತೆಯಲ್ಲಿ ಅರಿವು ಮೂಡಿಸಬೇಕು. ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅ ಧಿಕಾರಿಗಳು ಕ್ರಮ ಕೈಗೊಳ್ಳಬೇ ಕೆಂದು ತಿಳಿಸಿದರು.
ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ, ಅರ್ಚಕರಿಗೆ, ಮುಲ್ಲಾ, ಫಾದರ್‌ಗಳಿಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಬೇಕು. ಅದೇ ರೀತಿ ಆಟೋ ಚಾಲಕರು, ಲಸಿಕೆ ನೀಡುವಂತೆ ತಿಳಿಸಿದರು. ಕಲ್ಯಾಣ ಮಂಟಪಗಳಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವುದರಿಂದ ಹೆಚ್ಚು ಜನರು ಸೇರುತ್ತಾರೆ. ಈಗಾಗಲೇ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳನ್ವಯ ಹೆಚ್ಚು ಜನರು ಸೇರದಂತೆ ನಿಗಾ ವಹಿಸಬೇಕು. ಕಲ್ಯಾಣ ಮಂಟಪಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮದುವೆಗೆ ಹಾಜರಾಗುವವರಿಗೆ ಥರ್ಮಲ್ ಸ್ಕಾನಿಂಗ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವಂತೆ ಕಲ್ಯಾಣ ಮಂಟಪದ ಮಾಲೀಕರಿಗೆ ಸೂಚನೆ ನೀಡಬೇಕು. ಈ ನಿಯಮಗಳನ್ನು ಪಾಲಿಸದ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ ಈ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದು ಹೇಳಿದರು.
ಕೋವಿಡ್ ಸೋಂಕು ನಿಯಂತ್ರಿಸಲು ಸ್ವಯಂಪ್ರೇರಿತವಾಗಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಸ್ವಯಂಸೇವಕರು ನೋಂದಣಿ ಮಾಡಿಕೊಂಡು ಕಾರ್ಯ ನಿರ್ವಹಿಸಬಹುದಾಗಿದ್ದು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್. ಅಕ್ಷಯ್, ಅಪರ ಜಿಲ್ಲಾ ಧಿಕಾರಿ ಬಿ.ಆರ್. ರೂಪಾ, ತಹಶೀಲ್ದಾರ್ ಡಾ|ಕಾಂತರಾಜ್, ಜಿಲ್ಲಾ ಆರೋಗ್ಯ ಮತ್ತು ಕುಂಟಬ ಕಲ್ಯಾಣಾ ಧಿಕಾರಿ ಡಾ| ಉಮೇಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಮೋಹನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಎಚ್.ಕೆ. ಮಂಜುನಾಥ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಬಾಲಕೃಷ್ಣ ಮತ್ತಿತರರು ಇದ್ದರು.