Advertisement

ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವ ಅನಿವಾರ್ಯ

06:10 PM Apr 22, 2021 | Team Udayavani |

ಚಿಕ್ಕಮಗಳೂರು: ಕೋವಿಡ್‌-19 ಎರಡನೇ ಅಲೆ ಜಿಲ್ಲೆಯಲ್ಲೂ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡಬೇಕು ಎಂದು ಜಿಲ್ಲಾ ಕಾರಿ ಕೆ.ಎನ್‌.ರಮೇಶ್‌ ತಿಳಿಸಿದರು.

Advertisement

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌-19 ತಡೆಗಟ್ಟುವಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್‌-19 ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಶ್ರಮಿಸುತ್ತಿದ್ದು, ಇದರಲ್ಲಿ ಖಾಸಗಿ ಆಸ್ಪತ್ರಯವರ ಸಹಭಾಗಿತ್ವವು ಅವಶ್ಯವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆ ಕೋವಿಡ್‌ ಸೋಂಕಿತರಿಗೆ ಮೀಸಲಿಡಬೇಕು ಎಂದರು. ಇದೇ ಸಂದರ್ಭದಲ್ಲಿ ಬರುವ ಇತರೆ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.

ಪರ್ಯಾಯ ಮಾರ್ಗಗಳನ್ನು ರೂಪಿಸಬೇಕೆಂದು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಸೂಚಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ, ವೆಂಟಿಲೇಟರ್‌, ಆಂಬ್ಯುಲೆನ್ಸ್‌, ರೆಮ್‌ಡಿಸೀವಿರ್‌ ಚುಚ್ಚುಮದ್ದು ಸೌಲಭ್ಯವನ್ನು ನೀಡುವುದರೊಂದಿಗೆ ಕೋವಿಡ್‌ ಸೋಂಕಿತರೊಂದಿಗೆ ಸಹಕರಿಸಬೇಕು. ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆ ಕಂಡು ಬಂದಿದ್ದು, ಜಿಲ್ಲಾಡಳಿತ ಲಸಿಕೆ ಕೊರತೆ ನೀಗಿಸಿ ಸಮರ್ಪಕವಾಗಿ ಲಸಿಕೆ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌-19 ನಿಯಂತ್ರಣದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೂತೆ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತಕ್ಕೆ ಖಾಸಗಿ ಆಸ್ಪತ್ರೆ ವೈದ್ಯರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

Advertisement

ಜಿ.ಪಂ ಸಿಇಒ ಎಸ್‌.ಪೂವಿತಾ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌.ಅಕ್ಷಯ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ|ಉಮೇಶ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಮೋಹನ್‌, ಜಿಲ್ಲಾ ಸರ್ವೇಕ್ಷಣಾ  ಧಿಕಾರಿ ಡಾ|ಎಚ್‌.ಕೆ.ಮಂಜುನಾಥ್‌, ಖಾಸಗಿ ಆಸ್ಪತ್ರೆಗಳ ವೈದ್ಯರು, ವ್ಯವಸ್ಥಾಪಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು, ಆಡಳಿತ ಮಂಡಳಿಯೊಂದಿಗೆ ಸಭೆ
ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next