Advertisement

ಕೊರೋನಾ ಮಧ್ಯೆ ಮಳೆಯಾರ್ಭಟ

08:23 PM Apr 27, 2021 | Team Udayavani |

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕೊರೊನಾ ನಡುವೆಯೂ ಮಳೆಯ ಆರ್ಭಟವು ಜೋರಾಗಿದ್ದು, ಒಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

Advertisement

ಸೋಮವಾರ ಜಿಲ್ಲೆಯ ಮಲೆನಾಡು ಭಾಗದ ಅಲ್ಲಲ್ಲಿ ಮಳೆಯಾಗಿದೆ. ಮಳೆಯಿಂದ ಜಿಲ್ಲೆಯ ಕಾಫಿ, ಅಡಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ಪ್ರತಿದಿನ ಮಧ್ಯಾಹ್ನದ ವೇಳೆ ಮಲೆನಾಡು ಭಾಗದ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದೆ.

ಕಾಫಿ, ಅಡಕೆ ತೋಟಗಳಿಗೆ ಮಳೆಯ ನೀರು ಜೀವಕಳೆ ನೀಡುತ್ತಿರುವುದರಿಂದ ಬೆಳೆಗಾರರು ಸಂತಸದಲ್ಲಿದ್ದಾರೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗಿದ್ದು, ಸೋಮವಾರ ಉತ್ತಮ ಮಳೆಯಾಗಿದೆ.

ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next