Advertisement
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬೆಂಗಳೂರು ಹಾಗೂ ಹೊರ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ಬರುತ್ತಿರುವವರಿಂದ ಕೋವಿಡ್ ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ಹೊರ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡುವಂತೆ ತಿಳಿಸಿದ ಅವರು, ಆರ್.ಟಿ.ಪಿ.ಸಿ.ಆರ್ ಟೆಸ್ಟ್‌ನ ವರದಿ ಬರುವುದು ತಡವಾಗುತ್ತಿದ್ದು, ಬೇಗ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.
Related Articles
Advertisement
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಜಾತ್ರೆ, ರಥೋತ್ಸವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಸರ್ಕಾರ ಈಗಾಗಲೇ ಐ.ಟಿ.ಬಿ.ಟಿ ಕಂಪನಿಗಳಿಗೆ ಮನೆಯಲ್ಲೇ ಕೆಲಸ ಮಾಡುವಂತೆ ಸೂಚಿಸಿದೆ. ಐ.ಟಿ.ಬಿ.ಟಿ ಕಂಪನಿಯ ಉದ್ಯೋಗಿಗಳು ಈಗಾಗಲೇ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿರುವ ಹೋಂಸ್ಟೇಗಳ ರೂಂಗಳಿಗೆ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಗೆ ಹೆಚ್ಚಾಗಿ ಬರುತ್ತಿದ್ದಾರೆ. ಅವರ ಮೇಲೆ ನಿಗಾ ಇರಿಸಬೇಕು. ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಅನುವಾಗುವಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದರು. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ವೈದ್ಯಾ ಧಿಕಾರಿಗಳ ಕೊರತೆ ಇದ್ದು, ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳುವಂತೆ ಹಾಗೂ ಕೊಪ್ಪದಲ್ಲಿ ಆಂಬ್ಯುಲೆನ್ಸ್ ಕೊರತೆ ಇದ್ದು, ಕೊಪ್ಪಕ್ಕೆ ಆಂಬ್ಯುಲೆನ್ಸ್ ಕೊಡುವಂತೆ, ಕೊಪ್ಪ ನರಸಿಂಹರಾಜಪುರದ ಜನರಿಗೆ ಚಿಕ್ಕಮಗಳೂರಿಗಿಂತ ಶಿವಮೊಗ್ಗ ಹತ್ತಿರದಲ್ಲಿದ್ದು, ಶಿವಮೊಗ್ಗಕ್ಕೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲಾ ಧಿಕಾರಿಗಳು ಶಿವಮೊಗ್ಗದ ಜಿಲ್ಲಾಡಳಿತಕ್ಕೆ ಪತ್ರ ಬರೆಯಬೇಕೆಂದು ಹೇಳಿದರು.
ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಕೋವಿಡ್ ಸೋಂಕಿಗೆ ಸಂಬಂ ಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅ ಧಿಕಾರಿಗಳು ಇದ್ದರು.