Advertisement

ಕರ್ಫ್ಯೂಗೆ 2ನೇ ದಿನವೂ ಉತ್ತಮ ಪ್ರತಿಕ್ರಿಯೆ

10:41 PM Apr 30, 2021 | Team Udayavani |

ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಎರಡು ದಿನ ಕಳೆದಿದ್ದು, ಎರಡನೇ ದಿನವು ಕಾμನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೊದಲ ದಿನದಂತೆ ಗುರುವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಜನರು ಅಗತ್ಯ ವಸ್ತುಗಳ ಖರೀದಿ ನಡೆಸಿದರು.

Advertisement

ಜನ- ವಾಹನ ಸಂಚಾರ ಎಂದಿನಂತಿತ್ತು. 10 ಗಂಟೆ ಮುಗಿಯುತ್ತಿದ್ದಂತೆ ಪೊಲೀಸರು ತುರ್ತುಸೇವೆಗಳಾದ ಮೆಡಿಕಲ್‌ ಶಾಪ್‌, ಪೆ ಟ್ರೋಲ್‌ ಬಂಕ್‌, ಬ್ಯಾಂಕ್‌, ಎಟಿಎಂ, ಆಸ್ಪತ್ರೆ ಹೊರತುಪಡಿಸಿ ಉಳಿದ ಅಂಗಡಿ ಬಾಗಿಲು ಹಾಕಿಸಿದರು. ಬೆಳಗ್ಗೆ ಜನಸಂಚಾರ ಆರಂಭವಾಗುತ್ತಿದ್ದಂತೆ ನಗರದ ಮಾರ್ಕೆಟ್‌ ರಸ್ತೆ, ಎಂ.ಜಿ. ರಸ್ತೆ, ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಆಟೋ, ಟ್ಯಾಕ್ಸಿ, ಕಾರು- ಬೈಕ್‌ ಸಂಚಾರ ಎಂದಿನಂತಿತ್ತು. ಕೆಎಸ್‌ಆರ್‌ ಟಿಸಿ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ನಿಗ ದಿತ ಸಮಯ ಮೀರುತ್ತಿದ್ದಂತೆ ಪೊಲೀಸರು ವಾಹನ ಸಂಚಾರಕ್ಕೆ ಬ್ರೇಕ್‌ ಹಾಕಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಈಗಾಗಲೇ ನಿರ್ಮಿಸಿರುವ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ವಾಹನ ಸವಾರರನ್ನು ಅಡ್ಡಗಟ್ಟಿ ಯಾವ ಉದ್ದೇಶಕ್ಕಾಗಿ ಹೋಗುತ್ತಿರುವುದಾಗಿ ವಿಚಾರಿಸಿದರು.

ಅನಗತ್ಯವಾಗಿ ಸಂಚಾರ ನಡೆಸಿದರೆ ದಂಡ ವಿಧಿ ಸಿ ವಾಹನಗಳನ್ನು ಸೀಜ್‌ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು. 11 ಗಂಟೆ ವೇಳೆಗೆ ವ್ಯಾಪಾರ- ವಹಿವಾಟು ಸಂಪೂರ್ಣ ಸ್ತಬ್ಧಗೊಂಡಿತ್ತು. ತುರ್ತುಸೇವೆ ಮತ್ತು ತುರ್ತು ಕೆಲಸದ ನಿಮಿತ್ತ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಅಲ್ಲೊಂದು ಇಲ್ಲೊಂದು ವಾಹನಗಳು ಸಂಚರಿಸುತ್ತಿದ ದೃಶ್ಯ ಸಾಮಾನ್ಯವಾಗಿತ್ತು. ಒಟ್ಟಾರೆ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಿಧಿ ಸಿರುವ ಕೊರೊನಾ ಕರ್ಫ್ಯೂ ಎರಡನೇ ದಿನವು ಜಿಲ್ಲೆಯಲ್ಲಿ ಯಶಸ್ವಿಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next