ಚಿಕ್ಕಮಗಳೂರು: ಕೋವಿಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಅಧಿ ಕಾರ ನೀಡಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು.
ಬುಧವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಅಧಿ ಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಧಿಕಾರಿಗೆ ಸೂಚನೆ ನೀಡಿದ್ದೇನೆ. ಮಾರ್ಗಸೂಚಿ ಗಳನ್ನು ಉಲ್ಲಂಘಿಸುವರ ವಿರುದ್ಧ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಗೆ ಸೂಚನೆ ನೀಡಿದ್ದೇನೆ ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸು ತ್ತಿರುವ ಬಗ್ಗೆ ದೂರುಗಳು ಬಂದಿದ್ದು, ದೂರು ಪರಿಶೀಲಿಸಿ ಅಂತಹ ಆಸ್ಪತ್ರೆಗಳ ಮೇಲೆ ನಿಗಾ ಇಡಲು ಅ ಧಿಕಾರಿಗಳ ತಂಡ ರಚಿಸಲಾಗಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ನಗರದ ಕೆಆರ್‌ಎಸ್ ಆಸ್ಪತ್ರೆಯಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು ಅವರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ, ಮಂಗಳವಾರ ರಾತ್ರಿ ಸೋಂಕಿತ ವ್ಯಕ್ತಿಯೊರ್ವನಿಗೆ ಆಕ್ಸಿಜನ್ ನೀಡಲಾಗಿತ್ತು. ಆಗ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿದೆ. ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಆಕ್ಸಿಜನ್ ನೀಡಲಾಗಿದೆ. ಆಕ್ಸಿಜನ್ ನೀಡಿದರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದರು.
ಆಕ್ಸಿಜನ್ ಕೊರತೆಯಿಂದ ಯಾರು ಮೃತಪಟ್ಟಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಸಂಗ್ರಹವಿದೆ ಎಂದರು.