Advertisement

Chikkamagaluru; ಮಂಗನ ಕಾಯಿಲೆಗೆ ಶೃಂಗೇರಿಯ ವ್ಯಕ್ತಿ ಬಲಿ

03:19 PM Feb 03, 2024 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆ (ಕೆಎಫ್ ಡಿ) ಮೊದಲ ಬಲಿ ಪಡೆದುಕೊಂಡಿದೆ.

Advertisement

ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಕಾಣಿಸಿ ಕೊಂಡಿತ್ತು. ಮೂರು ದಿನಗಳ ಕಾಲ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.

ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಂಡಿರಲಿಲ್ಲ, ಇದೇ ಮೊದಲ ಪ್ರಕರಣವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ.

ಜಿಲ್ಲೆಯಲ್ಲಿ ಇದುವರೆಗೂ ಮೂರು ಪ್ರಕರಣಗಳು ಕಾಣಿಸಿಕೊಂಡಿದ್ದು, ಕೊಪ್ಪ ತಾಲೂಕಿನ ಜೋಗಿಸರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಅಲ್ಲಿಸುತ್ತಿರುವ 35 ವರ್ಷದ ಮಹಿಳೆಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇ ಕೊಪ್ಪ ತಾಲೂಕಿನ 65 ವರ್ಷದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು ಇವರು ಗುಣಮುಖರಾಗಿದ್ದಾರೆ.

ಈ ವರ್ಷ ಕಾಣಿಸಿಕೊಂಡ ಮೂರು ಪ್ರಕರಣದಲ್ಲಿ ಮಂಗನಕಾಯಿಲೆ ಓರ್ವರನ್ನು ಬಲಿ ಪಡೆದು ಕೊಂಡಿದೆ. ಇದಕ್ಕೂ ಮೊದಲು ಶಿವಮೊಗ್ಗ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮಂಗನಕಾಯಿಲೆಗೆ ಮೊದಲ ಬಲಿಯಾಗಿದ್ದರೇ, ಶೃಂಗೇರಿ ಮೂಲದ ವ್ಯಕ್ತಿ ಎರಡನೆ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದು ಮೊದಲ ಬಲಿಯಾಗಿದೆ. ಮಂಗನ ಕಾಯಿಲೆ ಕಾಣಿಸಿಕೊಂಡ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಮುಂಜಾಗೃತ ಕ್ರಮ ಕೈಗೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next