Advertisement

ಮದ್ಯ ಮಾರಾಟ ತಕ್ಷಣವೇ ನಿಲ್ಲಿಸಿ

01:04 PM May 14, 2020 | Team Udayavani |

ಚಿಕ್ಕಮಗಳೂರು: ರಾಜ್ಯದಲ್ಲಿ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Advertisement

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಲ್ಲಿಸಿದ ಪರಿಣಾಮ ಅನೇಕ ಕುಟುಂಬಗಳು ನೆಮ್ಮದಿಯ ಬದುಕು ಕಂಡಿದ್ದವು. ಕೌಟುಂಬಿಕ ಹಿಂಸೆ, ದೌರ್ಜನಗಳು, ಅಪರಾಧಕೃತ್ಯಗಳು ಬಹುತೇಕ ಕಡಿಮೆಯಾಗಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದ್ದರಿಂದ ಗ್ರಾಹಕರು ಯಾವುದೇ ಮುಂಜಾಗೃತ ಕ್ರಮಗಳನ್ನು ಅನುಸರಿಸದಿರುವುದರಿಂದ ಕೋವಿಡ್ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡಲು ಸರ್ಕಾರವೇ ಅವಕಾಶ ನೀಡಿದಂತಾಗಿದೆ ಎಂದು ದೋಷಿಸಿದ್ದಾರೆ.

ಕಾರ್ಮಿಕರು, ರೈತರ ಹಿತರಕ್ಷಣೆಗೆ ಸರ್ಕಾರ ಪ್ಯಾಕೇಜ್‌ ಘೋಷಣೆ ಮಾಡಿದೆ. ಈ ಹಣವನ್ನು ದುರ್ಬಳಕ್ಕೆ ಮಾಡಿಕೊಂಡು ಕುಡಿತದ ಚಟದಿಂದ ಹಣ ಮದ್ಯದಂಗಡಿ ಪಾಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರೆದಿರುವ ಎಲ್ಲಾ ಮದ್ಯದಂಗಡಿಗಳನ್ನು ಶೀಘ್ರದಲ್ಲೇ ಮುಚ್ಚಿಸಬೇಕೆಂದು ಒತ್ತಾಯಿಸಿದರು. ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾಯಾಧ್ಯಕ್ಷ ಬಿ.ಸಿ.ದಯಾಕರ್‌, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಮಂಜೇಗೌಡ, ಕಾರ್ಯದರ್ಶಿ ಕೆ.ಪಿ. ಮೋಹನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next