Advertisement
ಈ ಕುರಿತು ಪ್ರಕಟನೆ ನೀಡಿರುವ ಅವರು, ಈ ಆಚರಣೆ ಹಿಂದೆ ದಾದಾಪೀರ್ ಛಿಲ್ಲಾ ಹಾಗೂ ಗಾದಿಯನ್ನು ಬದಲಾಯಿಸುವ ಸಂಚು ಅಡಗಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಡಳಿತ ಮೃದು ಧೋರಣೆ ಅನುಸರಿಸುತ್ತಿದ್ದು, ಹೊಸ ಆಚರಣೆ ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.ಗುರುದತ್ತಾತ್ರೇಯ ಬಾಬಾಬುಡನ್ ದರ್ಗಾವು ಮುಹ ಮ್ಮದೀಯ ಸಂಸ್ಥೆ ಎಂದು ಮುಜ ರಾಯಿ ಇಲಾಖೆಯ ಗೆಜೆಟಿ ಯರ್ ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು ಗಮನಿಸಬೇಕಿದೆ ಎಂದು ತಿಳಿಸಿದ್ದಾರೆ.
ದತ್ತ ಪೀಠದಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಅಡೆತಡೆ ಯಿಲ್ಲದೆ ಕೋರ್ಟ್ ಆದೇಶದಂತೆ ನಡೆದುಕೊಂಡು ಬರುತ್ತಿದ್ದ ನಿತ್ಯ ಪೂಜಾ ಕಾರ್ಯಗಳಿಗೆ ನ. 19ರಂದು ಶಾ ಖಾದ್ರಿ ವಂಶಸ್ಥರೆಂದು ಕೊಂಡ ಒಂದು ಗುಂಪು ಪೊಲೀಸ್ ಬಿಗಿ ಭದ್ರತೆ ನಡುವೆಯೂ ದತ್ತಪೀಠದ ಆವರಣದೊಳಗೆ ನುಗ್ಗಿ ಅರ್ಚಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದೆ. ಕೂಡಲೇ ಜಿಲ್ಲಾಡಳಿತ ಈ ಗುಂಪಿನ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗ ಸಹ ಕಾರ್ಯದರ್ಶಿ ಆರ್.ಡಿ. ಮಹೇಂದ್ರ ಆಗ್ರಹಿಸಿದ್ದಾರೆ.