Advertisement

Chikkamagaluru: ಆ.17ರ ಶನಿವಾರ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕು ಬಂದ್

08:40 AM Aug 17, 2024 | Team Udayavani |

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳಲ್ಲಿ ಆ.17ರ ಶನಿವಾರ ಬಂದ್ ಗೆ ಕರೆ ನೀಡಲಾಗಿದೆ.

Advertisement

ಮಲೆನಾಡು ನಾಗರೀಕ ರೈತ ಹಿತರಕ್ಷಣಾ ವೇದಿಕೆಯಿಂದ ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಬಂದ್ ಕರೆ ನೀಡಲಾಗಿದ್ದು, ಸರ್ಕಾರದ ವಿರುದ್ದ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪದಲ್ಲಿ ಸಂಘಟನೆ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಗೆ ಕರೆ ನೀಡಿದ್ದಾರೆ.

ಸರ್ಕಾರದ ಧೋರಣೆ ಖಂಡಿಸಿ 3 ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಿದ್ದು,  ಒತ್ತುವರಿ ತೆರವು, ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣ  ಸೇರಿದಂತೆ ಇತರ ರೈತ ವಿರೋಧಿ ಧೋರಣೆ ಖಂಡಿಸಿ ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next