Advertisement

Chikkamagaluru: ಬೈಕ್, ಆಂಬ್ಯುಲೆನ್ಸ್ ಮುಖಾಮುಖಿ ಡಿಕ್ಕಿ; ಸವಾರಿಬ್ಬರಿಗೆ ತೀವ್ರ ಗಾಯ

03:02 PM Oct 09, 2023 | Team Udayavani |

ಚಿಕ್ಕಮಗಳೂರು: ಬೈಕ್ ಹಾಗೂ ಆಂಬ್ಯುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಸವಾರಿಬ್ಬರು ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೆನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಆ.9ರ ಸೋಮವಾರ ನಡೆದಿದೆ.

Advertisement

ಬೈಕ್‌ ಸವಾರಿಬ್ಬರು ಬೇಲೂರಿನ ಮೂಲದವರು ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿಗೆ ರೋಗಿಯನ್ನು ಬಿಟ್ಟು ಮಂಗಳೂರಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರಿಗೂ ತೀವ್ರ ಗಾಯಗಳಾಗಿದ್ದು, ಮೂಡಿಗೆರೆಯಲ್ಲಿ ಪ್ರಥಮ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗೆ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ

ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next