Advertisement

ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ: ಅಡಿಗ

04:37 PM Jan 31, 2020 | Naveen |

ಚಿಕ್ಕಮಗಳೂರು: ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಮಹಾತ್ಮ ಗಾಂಧೀಜಿ ಕನಸಿನ ಸ್ವತ್ಛ ಭಾರತದ ಕನಸು ನನಸಾಗುತ್ತದೆ ಎಂದು ಜಿಲ್ಲಾ ಸತ್ರ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಅಧ್ಯಕ್ಷ ಉಮೇಶ್‌ ಎಂ.ಅಡಿಗ ಹೇಳಿದರು.

Advertisement

ಗುರುವಾರ ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರಸಭೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಪ್ರಥಮ ಆದ್ಯತೆಯಾಗಬೇಕು. ನಮ್ಮ ಮನೆ ಸುತ್ತಮುತ್ತಲಿನ ಪ್ರದೇಶಗಳು, ರಸ್ತೆ, ಚರಂಡಿ ಸೇರಿದಂತೆ ಸಾರ್ವಜನಿಕ ಸ್ಥಳಗಳಾದ ಶಾಲೆ, ಆಸ್ಪತ್ರೆ, ಅಂಗನವಾಡಿ, ಸಮುದಾಯ ಭವನ ಸ್ವತ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹರಿಜನ ಕೇರಿಗಳಿಗೆ ಭೇಟಿ ನೀಡಿ ತಾವೇ ಸ್ವಚ್ಛತಾ
ಕಾರ್ಯದಲ್ಲಿ ಭಾಗವಹಿಸುವ ಮೂಲಕ ಅಲ್ಲಿನ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸುತ್ತಿದ್ದರು. ಅಲ್ಲದೇ, ನೆರೆಹೊರೆಯವರಿಗೂ ಸ್ವಚ್ಛತೆಯ ಬಗ್ಗೆ ತಿಳಿಸಿಕೊಡುತ್ತಿದ್ದರು. ಅವರ ಹಾದಿಯಲ್ಲೇ ನಾವು ಸಾಗಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಕಾಪಾಡಿಕೊಳ್ಳಲು, ಸ್ವಸ್ಥ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಪಣತೊಡಬೇಕು. ಎಲ್ಲೆಂದರಲ್ಲಿ ರಸ್ತೆ ಬೀದಿಗಳಲ್ಲಿ ಕಸವನ್ನು ಬಿಸಾಡುವುದರಿಂದ ರೋಗರುಜಿನಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಸೋಂಕು ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕಿದೆ ಎಂದರು.

Advertisement

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್‌ ಹಾಗೂ ನಗರಸಭೆ ಪ್ರಭಾರ ಪೌರಾಯುಕ್ತ ಚಂದ್ರಶೇಖರ್‌ ಮಾತನಾಡಿ, ಸರ್ವೋದಯ ದಿನದ ವಿಶೇಷವಾಗಿ ಇಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಉದ್ದೇಶ ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಪ್ರತಿಯೊಬ್ಬರು ನನ್ನ ಗ್ರಾಮ, ನನ್ನ ದೇಶ, ನನ್ನ ಸಮಾಜ ಎನ್ನುವ ಪರಿಕಲ್ಪನೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಗಾಂಧೀಜಿ ಸ್ವತ್ಛ ಭಾರತದ ಕನಸನ್ನು ಪೂರ್ಣಗೊಳಿಸಲು ಸಾಧ್ಯ ಎಂದರು.

ಸ್ವಚ್ಛತೆ ಎನ್ನುವ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲೂ ಇಚ್ಛೆಯಿಂದ ಮೂಡಬೇಕು. ಕೇವಲ ಸರ್ಕಾರದಿಂದಲೇ ಸಾಧಿ ಸಲಾಗದು. ಅದಕ್ಕೆ ಸಮುದಾಯ, ಸಂಘಟನೆ ಹಾಗೂ ಮಾಧ್ಯಮಗಳ ಸಹಕಾರ ತೀರಾ ಅಗತ್ಯ ಎಂದರು. ಪ್ರತಿಯೊಬ್ಬರೂ ಸ್ವತ್ಛತೆ ಕಾಪಾಡಲು
ಮುಂದಾಗಬೇಕು. ಬೀದಿ ಬದಿಗಳಲ್ಲಿ ಕಸವನ್ನು ಎಸೆಯುವುದರಿಂದ ಮಾಲಿನ್ಯ ಉಂಟಾಗಿ ರೋಗರುಜಿನಗಳು ಹರಡುತ್ತವೆ. ಇದನ್ನು ತಡೆಯಲು ಸಮುದಾಯದ ಪಾತ್ರ ಅವಶ್ಯಕವಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ, ನ್ಯಾಯಾಧಿಧೀಶರಾದ ಅರುಣಕುಮಾರಿ, ಶರ್ಮಿಳಾ, ಸಿದ್ಧರಾಮಪ್ಪ, ಸರ್ಕಾರಿ ಅಭಿಯೋಜಕ ರಾಘವೇಂದ್ರ ರಾಯ್ಕರ್‌, ಜಿಲ್ಲಾ ಸರ್ವೇಕ್ಷಣಾ  ಧಿಕಾರಿ ಮಂಜುನಾಥ್‌, ರೋಟರಿ ಕಾಫಿಲ್ಯಾಂಡ್‌ ಸಂಸ್ಥೆಯ ಅಧಿಕಾರಿಗಳು ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next