Advertisement

ಚಿಕ್ಕಮಗಳೂರು ಕೋವಿಡ್ ಸೋಂಕಿಗೆ ಮೂವರು ಬಲಿ! 199 ಹೊಸ ಪ್ರಕರಣ

06:30 PM Sep 14, 2020 | sudhir |

ಚಿಕ್ಕಮಗಳೂರು : ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದು ಸೋಮವಾರ ಜಿಲ್ಲೆಯಲ್ಲಿ ಮೂವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು 199 ಹೊಸ ಪ್ರಕರಣಗಳು ದೃಢಪಟ್ಟಿವೆ.

Advertisement

ಇಂದಿನ 199 ಹೊಸ ಪ್ರಕರಣಗಳಲ್ಲಿ ಚಿಕ್ಕಮಗಳೂರು 74, ಕಡೂರು 40, ತರೀಕೆರೆ 56, ಮೂಡಿಗೆರೆ 7, ಕೊಪ್ಪ 10, ಎನ್.ಆರ್.ಪುರ 6, ಶೃಂಗೇರಿಯಲ್ಲಿ 6 ಕೇಸ್ ಗಳು ಪತ್ತೆಯಾಗಿವೆ.

ಕೋವಿಡ್ ಸೋಂಕಿನಿಂದಾಗಿ ಇಂದು ಮೂವರು ಸಾವನ್ನಪ್ಪಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 103 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದ ಕೋರ್ಟ್

ಇದುವರೆಗೂ 4787 ಜನ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದಿನ 199 ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 6265ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1375 ಸಕ್ರಿಯ ಪ್ರಕರಣಗಳಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next