Advertisement

ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಹೊಸ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆ

07:12 PM May 31, 2021 | Team Udayavani |

ಚಿಕ್ಕಮಗಳೂರು : ಸಂಪೂರ್ಣ ಲಾಕ್ ಡೌನ್ ಹೇರಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕೊಂಚ ಮಟ್ಟಿನಲ್ಲಿ ಕಡಿಮೆಯಾದ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಹೊಸ ಮಾರ್ಗ ಸೂಚಿಯಂತೆ ದಿನಸಿ ಅಂಗಡಿ, ಮೀನು-ಮಾಂಸ ಮಾರಾಟಕ್ಕೆ ಬೆಳಗ್ಗೆ 6 ರಿಂದ 10 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಕಳೆದ ಹತ್ತು ದಿನಗಳಿಂದ ಬಂದ್ ಮಾಡಲಾಗಿದ್ದ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು ಕೇವಲ ಪಾರ್ಸೆಲ್ ಕೊಂಡುಹೋಗಲು ಅವಕಾಶ ನೀಡಲಾಗಿದೆ.

ತಳ್ಳುವ ಗಾಡಿಯಲ್ಲಿ ಹಣ್ಣು-ತರಕಾರಿಗಳನ್ನ ಮಾರಾಟ ಮಾಡಲು ಅವಕಾಶ ನೀಡಲಾಗಿದೆ, ಕೃಷಿ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ :ಸಿಡಿ ಲೇಡಿಯ ಹೆಬಿಯಸ್ ಕಾರ್ಪಸ್ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ

ಈ ಹೊಸ ಆದೇಶ ಜೂನ್ 1 ರಿಂದ ಜೂನ್ 6ರವರೆಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next