ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರ ಕಡಿತಲೆ ಪ್ರಕರಣ ಸಂಬಂಧ ಮೂವರು ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಭದ್ರಾ ಅಭಯಾರಣ್ಯ ವ್ಯಾಪ್ತಿ ಯ ತಣಗೀಬೈಲು, ಅಯ್ಯನ ಕೆರೆ, ಗುರುಪುರ ಗುಡ್ಡದ ಬೀರನ ಹಳ್ಳಿ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ, ಬೀಟೆ, ತೇಗದ ಮರಗಳನ್ನು ಕಡಿತಲೆ ಮಾಡಲಾಗಿತ್ತು. ಲಕ್ಷಾಂತರ ರೂ.ನಷ್ಟ ವಾಗಿದೆ.
ಅಭಯಾರಣ್ಯದೊಳಗೆ ಅಕ್ರಮ ಪ್ರವೇಶ ಸಾಧ್ಯವಿಲ್ಲ, ಅಂತದರಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಡಿತಲೆಯಾಗಿದ್ದು ಹೇಗೆ ಇದರ ಹಿಂದೆ ಅರಣ್ಯಧಿಕಾರಿಗಳ ಕುಮ್ಮಕು ಮತ್ತು ನಿರ್ಲಕ್ಷ್ಯದಿಂದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಎಚ್ಚೇತ್ತು ಕೊಂಡ ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಸದ್ದಾಂ ಹುಸೇನ್, ಅರುಣ್ ಹಾಗೂ ಡಿ.ಆರ್.ಎಫ್.ಓ ಸುನೀಲ್ ಅವರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ: ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ