Advertisement

ಡಿಸಿ ಕಚೇರಿ ಕಾಮಗಾರಿ ಸಮಸ್ಯೆ ಶೀಘ್ರ ಇತ್ಯರ್ಥ: ರವಿ

04:17 PM Jul 03, 2020 | Naveen |

ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಾಮಗಾರಿಯ ಭೂ ವಿವಾದವನ್ನು ಬಗೆಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

Advertisement

ಬುಧವಾರ ನಗರದ ಪವಿತ್ರವನ ಸಮೀಪದಲ್ಲಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ಕಂದಾಯ ಸಚಿವ ಆರ್‌.ಅಶೋಕ್‌ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದಿನ ಸರ್ಕಾರದ ಆತುರದ ನಿರ್ಧಾರ ಮತ್ತು ಕಾಮಗಾರಿ ಜಾಗ ವಿವಾದದಿಂದ ಕಾಮಗಾರಿ ವಿಳಂಬವಾಗಿದ್ದು, ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ ಎಂದರು.

ಅಂದಿನ ಜಿಲ್ಲಾಧಿಕಾರಿ ಸರ್ಕಾರದ ಅಣತಿಯಂತೆ ಕುಣಿದಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ಅಂದೇ ಸಮಸ್ಯೆಯ ಮುನ್ಸೂಚನೆ ನೀಡಿದ್ದರೂ ಅಂದಿನ ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಮಾಲೀಕನಿಗೆ ಪರ್ಯಾಯವಾಗಿ ಎರಡು ಎಕರೆ ಜಮೀನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಸದ್ಯ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಂಕೀರ್ಣ ಕಟ್ಟಡ ನಗರದ ಹೊರವಲಯದಲ್ಲಿದ್ದು, ನಗರದ ಮಧ್ಯೆ ಇರುವ ತೋಟಗಾರಿಕೆ ಇಲಾಖೆ 11 ಎಕರೆ ಜಾಗದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗುವುದು. ತಾಂತ್ರಿಕವಾಗಿ ಕಾರ್ಯಗತವಾದಲ್ಲಿ ನನೆಗುದಿಗೆ ಬಿದ್ದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇಂಜಿನಿಯರಿಂಗ್‌ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next