Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಸೂಯ ಜಯಂತಿಯು ಡಿ.10 ರಂದು ಹಾಗೂ ಡಿ.12 ರಂದು ದತ್ತ ಜಯಂತಿ ನಡೆಯಲಿದೆ. ದತ್ತಜಯಂತಿಗೆ ಬರುವ ಭಕ್ತಾದಿ ಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೀರಿನ ಟ್ಯಾಂಕರ್‌ಗಳನ್ನು ಹೆಚ್ಚಾಗಿ ಒದಗಿಸಬೇಕು. ದೂರವಾಣಿ ಸಂಪರ್ಕ ವ್ಯವಸ್ಥೆಯನ್ನು ಸಮಪರ್ಕವಾಗಿ ಕಲ್ಪಿಸುವಂತೆ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಆದೇಶಿಸಿದರು.
ದತ್ತ ಪೀಠಕ್ಕೆ ಬರುವ ಸ್ವಯಂ ಸೇವಕರಿಗೆ ಮತ್ತು ಭಕ್ತರಿಗೆ ಜಿಲ್ಲಾಡಳಿತದಿಂದ ಪ್ರಸಾದ ವಿತರಿಸಲಾಗುವುದು. ಜಯಂತಿಯು ಶಾಂತಿಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು. ಹೊರ ಜಿಲ್ಲೆಯಿಂದ ಬರುವ ಸ್ವಯಂ ಸೇವಕರಿಗೆ ಶಾಂತಿಯಿಂದ ಕಾರ್ಯಕ್ರಮ ನಡೆಯಲು ಸಹಕರಿಸುವಂತೆ ತಿಳಿಸಬೇಕು ಎಂದು ಮುಖಂಡರಲ್ಲಿ ಮನವಿ ಮಾಡಿದರು.
ಚಿಕ್ಕಮಗಳೂರು ಪ್ರವಾಸಿ ತಾಣವಾಗಿದ್ದು, ಪ್ರತಿನಿತ್ಯ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಆದರೆ ದತ್ತ ಜಯಂತಿ ಕಾರ್ಯಕ್ರಮದ ವೇಳೆಯಲ್ಲಿ ದತ್ತಪೀಠಕ್ಕೆ ಡಿ.10, 11 ಮತ್ತು 12 ರಂದು ಪ್ರವಾಸಿಗರನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.
ಕಾರ್ಯಕ್ರಮದ ಭದ್ರತಾ ವ್ಯವಸ್ಥೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಮಾಹಿತಿ ನೀಡಿ, ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಅತೀ ಮುಖ್ಯ. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಉಪವಿಭಾಗಾಧಿಕಾರಿ ರೂಪ, ತಹಶೀಲ್ದಾರ್ ನಂದಕುಮಾರ್, ನಗರಸಭೆ ಪೌರಾಯುಕ್ತ ಪರಮೇಶಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘಟನೆಗಳ ಮುಖಂಡರು ಮತ್ತಿತರರು ಹಾಜರಿದ್ದರು.