ಚಿಕ್ಕಮಗಳೂರು: ನಿಧಿ ಹುಡುಕಲೆಂದು ದುಷ್ಕರ್ಮಿಗಳ ತಂಡವು ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಮಾರು10 ಅಡಿ ಅಗಲ, 15 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ.
ಉಡುಪಿ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ಬಂದಿದ್ದ ನಿಧಿ ಶೋಧದ ತಂಡವು ಕೆಸರಿಕೆ ಗ್ರಾಮದಲ್ಲಿ ಪೂಜೆ ನಡೆಸಿದೆ. ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿದೆ.
ಇದನ್ನೂ ಓದಿ;Titanic ನೋಡಲು ಸಬ್ ಮರ್ಸಿಬಲ್ ನಲ್ಲಿ ತೆರಳಿದ್ದ ಐವರು ಜಲಸಮಾಧಿ: ಅಧಿಕೃತ ಹೇಳಿಕೆ
ಗ್ರಾಮದ ನಿರ್ಜನ ಪ್ರದೇಶದಲ್ಲಿ 15 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು ಸ್ಥಳಕ್ಕೆ ತೆರಳಿದ್ದಾರೆ. ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಗೊಂಡಿದ್ದಾರೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.