Advertisement

ಫೆ.28ರಿಂದ ಜಿಲ್ಲಾ ಉತ್ಸವ ಆಚರಣೆ

03:20 PM Jan 27, 2020 | Naveen |

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ ಚಂದ್ರಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಫೆ.28 ರಿಂದ ಮಾ.1ರವರೆಗೆ ಜಿಲ್ಲಾ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

Advertisement

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಿಲ್ಲಾ ಉತ್ಸವ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದಲ್ಲಿ ಮುಖ್ಯವಾಗಿ ದೇಶೀಯ ಪರಂಪರೆಗಳನ್ನು ಪ್ರತಿನಿ ಧಿಸುವ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಗ್ರಾಮೀಣ ಕ್ರೀಡೆಗಳ ಆಯೋಜನೆಗೆ ಹೆಚ್ಚು ಮಹತ್ವ ನೀಡುವುದರ ಜತೆಗೆ ಅಲ್ಪಾವಧಿಯಲ್ಲಿ ಹೆಚ್ಚು ಜನರು ತೊಡಗಿಕೊಳ್ಳುವಂತಹ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ ಎಂದರು. ಜಿಲ್ಲೆಯನ್ನು ಪ್ರತಿನಿಧಿಸುವ ಆಹಾರ, ಕೃಷಿ, ಕೈಗಾರಿಕೆ, ಕರಕುಶಲ ವಸ್ತುಗಳು ಸೇರಿದಂತೆ ಮತ್ತಿತರ ವಸ್ತು ಪ್ರದರ್ಶನ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡೆಗಳಲ್ಲಿ
ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದರು.

ಜಿಲ್ಲೆಯ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳ ಮಹತ್ವವನ್ನು ತಿಳಿಸುವಂತಹ ಸಣ್ಣ ಕೈಪಿಡಿಯನ್ನು ಜಿಲ್ಲಾ ಉತ್ಸವದಲ್ಲಿ ನೀಡಲಾಗುತ್ತದೆ. ಕ್ರೀಡೆಗಳಲ್ಲಿ ಮಕ್ಕಳು, ಯುವಕರು, ಮದ್ಯ ವಯಸ್ಕರು ಮತ್ತು ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ವಿಭಾಗಗಳನ್ನು ಮಾಡುವಂತೆ ತಿಳಿಸಲಾಯಿತು.

ಜಿಲ್ಲಾ ಉತ್ಸವಕ್ಕೆ ಆಗಮಿಸುವ ಜನಸಾಮಾನ್ಯರಿಗೆ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ವಿಶೇಷ ಪ್ಯಾಕೇಜ್‌, ಬಸ್‌ ವ್ಯವಸ್ಥೆ ಮಾಡುವಂತೆ ಅ ಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ವಸ್ತು ಪ್ರದರ್ಶನ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡೆಗಳು ನಡೆಯುವ ಸ್ಥಳದಲ್ಲಿ ತುರ್ತು ಚಿಕಿತ್ಸೆ ಗಾಗಿ ತಾತ್ಕಾಲಿಕ ಚಿಕಿತ್ಸಾಲಯ, ಡಾಕ್ಟರ್‌ ಮತ್ತು ನರ್ಸ್‌ಗಳನ್ನು ನಿಯೋಜಿಸಲು ಆರೋಗ್ಯ ಕುಟುಂಬ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಮೇಳದಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳುವುದರ ಜತೆಗೆ ವಸ್ತುಗಳ ಮಾರಾಟಕ್ಕೆ ಆದಷ್ಟು ಕಡಿಮೆ ಬೆಲೆ ನಿಗ ದಿಪಡಿಸಲು ಚಿಂತನೆ ನಡೆಸುವುದಾಗಿ ತಿಳಿಸಿದರು
ಜಿಲ್ಲಾ ಉತ್ಸವ ಯಶಸ್ವಿಯಾಗಿ ನಡೆಸಲು ಸಮಿತಿಗಳು ಮತ್ತು ಉಪ ಸಮಿತಿಗಳನ್ನು ರಚಿಸಿದ್ದು, ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

Advertisement

ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಎಸ್‌.ಅಶ್ವತಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಹರೀಶ್‌ ಪಾಂಡೆ, ಅಪರ ಜಿಲ್ಲಾಧಿಕಾರಿ
ಡಾ| ಕುಮಾರ್‌, ಉಪವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next