Advertisement

ಯಶಸ್ಸು ಗಳಿಸಬೇಕಾದ್ರೆ ಪರಿಶ್ರಮ ಅಗತ್ಯ: ಪ್ರೊ|ಜಯದೇವ

04:22 PM May 22, 2019 | Team Udayavani |

ಚಿಕ್ಕಮಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ಶ್ರದ್ಧೆ, ಪರಿಶ್ರಮ, ಸತತ ಪ್ರಯತ್ನ, ನಿರಂತರ ಕಲಿಕೆ ಅಗತ್ಯವಾಗಿದೆ ಎಂದು ಎಐಟಿ ಪ್ರಾಂಶುಪಾಲ ಪ್ರೊ| ಸಿ.ಟಿ.ಜಯದೇವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement

ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆಯೋಜಿಸಿದ್ದ ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಸಾಧನೆ ಮಾಡಿರುವ ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್‌, ಮಕ್ಕಳನ್ನು ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಮನ್ನಾನ್‌ ಸಿದ್ದಿಕ್‌ ಹುಸೇನ್‌, ಜೈಬುನ್ನೀಸಾ ಹಾಗೂ ದಿ| ಕಾಳಮ್ಮ ಡಿ.ಎ.ರಾಮೇಗೌಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಗ್ರಾಮೀಣ ಮಕ್ಕಳ ಶೈಕ್ಷಣಿಕ ಸವಾಲುಗಳು ಮತ್ತು ಪರಿಹಾರ’ ವಿಷಯ ಕುರಿತು ಎಂಎಲ್ಎಂಎನ್‌ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ವಿಜಯಲಕ್ಷ್ಮೀ ದೇಸಾಯಿ, ‘ನೈತಿಕ ಮೌಲ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ’ ಕುರಿತು ಶಿಕ್ಷಕ ವಿರೂಪಾಕ್ಷಪ್ಪ ಅಣ್ಣೀಗೆರೆ ಉಪನ್ಯಾಸ ನೀಡಿದರು.

ಈ ವೇಳೆ ಕಡೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯಳ್ಳಂಬಳಸೆ ಗ್ರಾಮದ ವಿದ್ಯಾರ್ಥಿನಿ ವೈ.ಪಿ.ಕಾವ್ಯ ಕನ್ನಡ ಮಾಧ್ಯಮದಲ್ಲಿ 577 ಅಂಕಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರೆ, ಎಸ್ಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಕಳಸ ಪ್ರಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ ವಿ.ಆರ್‌.ವಿಘ್ನೕಶ 607 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

Advertisement

ಎಸ್ಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಎನ್‌.ಆರ್‌.ಪುರ ತಾಲೂಕು ಮುತ್ತಿನಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಆಫ್ರಿದ್‌ ಸಫಾ 579, ಕಡೂರು ತಾಲೂಕು ವಡೇರಹಳ್ಳಿ ಮೃತ್ಯುಂಜಯ ಪ್ರೌಢಶಾಲೆಯ ವಿದ್ಯಾರ್ಥಿ ಜಿ.ಎನ್‌.ರುಚಿತ 589, ಶೃಂಗೇರಿಯ ಜಗದ್ಗುರು ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯ ಕೆ.ಎನ್‌.ವಿಶ್ವಾಸ್‌ 574, ಕೊಪ್ಪ ತಾಲೂಕ‌ು ಬೊಮ್ಲಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ಆರ್‌.ಧನಂಜಯ 596, ಜೋಡಿಹೋಚಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಚ್.ಕೆ.ನಾಗಲಕ್ಷ್ಮೀ 603, ಚಿಕ್ಕಮಗಳೂರು ತಾಲೂಕು ತೊಗರಿಹಂಕಲ್ ಸರ್ಕಾರಿ ಪ್ರೌಢಶಾಲೆಯ ಎನ್‌.ಅಂಕಿತ 583, ತರೀಕೆರೆ ತಾಲೂಕು ಹಿರೇಕಾನವಂಗಲ ರುದ್ರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಲಾಂಚನ 574 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಜಿಲ್ಲಾ ಸಂಚಾಲಕ ಎಂ.ಆರ್‌.ಪ್ರಕಾಶ್‌, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಖಜಾಂಚಿ ಚಂದ್ರೇಗೌಡ ಇನ್ನಿತರರಿದ್ದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ ಕಾರ್ಯಕ್ರಮವನ್ನು ನಿರೂಪಿಸಿದರು, ಖಜಾಂಚಿ ಪ್ರೊ|ಕೆ.ಎನ್‌.ಲಕ್ಷ್ಮೀಕಾಂತ್‌ ಸ್ವಾಗತಿಸಿದರು. ಜಾಗರ ಹೋಬಳಿ ಅಧ್ಯಕ್ಷ ಕಳವಾಸೆ ರವಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next