Advertisement

ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ

06:17 PM Sep 22, 2019 | Naveen |

ಚಿಕ್ಕಮಗಳೂರು: ಮಾನವನ ಬದುಕಿನ ಸಮತೋಲನ, ದೀರ್ಘ‌ ಕಾಲದ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ವ್ಯಕ್ತಿಯಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರೀಡೆಗಳು ಸಹಕಾರಿ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

Advertisement

ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ 2019-20ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವವರು ದೀರ್ಘ‌ಕಾಲ ಉತ್ತಮ ಆರೋಗ್ಯ ಹೊಂದಲು ಸಹಕರಿಯಾಗುತ್ತದೆ. ಶಾಲಾ ಮಟ್ಟದಿಂದ ಆರಂಭವಾದ ದಸರಾ ಕ್ರೀಡಾಕೂಟವನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಿರಂತರವಾಗಿ ಹಮ್ಮಿಕೊಂಡಿರುವ ಸಮಯದಲ್ಲಿ ಆತಿಥೇಯ ಕಾಲೇಜಾಗಿ ಬೇಲೂರು ರಸ್ತೆ ಸ.ಪ.ಪೂ.ಕಾಲೇಜು ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಷಯ ಎಂದರು.

ಎಲ್ಲಾ ಕ್ರೀಡಾಪಟುಗಳು ಸ್ಪರ್ಧಾತ್ಮಕ ಮನೋಭಾವದಿಂದ ಪಾಲ್ಗೊಂಡು ನಿಯಮಗಳಿಗೆ ಬದ್ಧವಾಗಿ ಸಾಮರ್ಥ್ಯ ಮತ್ತು ಪ್ರತಿಭೆಗಳ ಮೂಲಕ ಗೆಲುವನ್ನು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜು ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉತ್ತಮ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ಉಪನ್ಯಾಸಕರು ಕಾರ್ಯನಿರ್ವಹಿಸಬೇಕು ಎಂದರು.

Advertisement

ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಎನ್‌ ಎಸ್‌ಎಸ್‌, ಸೇವಾದಳಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವೆಂಕಟೇಶ್‌ ಪೈ, ಪ್ರಾಚಾರ್ಯರ ಸಂಘದ ಅಧ್ಯಕ್ಷೆ ತಸ್ಲೀಮಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೋದಂಡರಾಮ್‌, ಆರ್‌. ಕೆ.ಜಯರಾಮ್‌, ಲಲಿತ್‌ಕುಮಾರ್‌, ಎಪಿಎಂಸಿ ಅಧ್ಯಕ್ಷ ಮಹೇಂದ್ರ ಕುಮಾರ್‌, ದೈಹಿಕ ಶಿಕ್ಷಕರಾದ ಮಂಜುನಾಥ್‌, ಗಂಗಾಧರ್‌ ಮತ್ತು ಶಬ್ಟಾರ್‌, ತುಂಗಾಕುಮಾರ್‌, ಜಯವರ್ಧನ್‌, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next