Advertisement
ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಜೊತೆಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿಯನ್ನು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಪಡೆಯುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಶ್ರಮ ವಹಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ರಜೆ ನೀಡದೆ ಪರೀಕ್ಷಾ ಪೂರ್ವ ವಿಶೇಷ ತರಗತಿಗಳನ್ನು ನೀಡಬೇಕೆಂದು ಸೂಚಿಸಿದರು. ಆರೋಗ್ಯ ಇಲಾಖೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಇದೇ ರೀತಿ ಎಲ್ಲಾ ಇಲಾಖೆಯವರು ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
Related Articles
Advertisement
ಕೊಪ್ಪದಲ್ಲಿ ಸರ್ಕಾರಿ ನೌಕರನೊಬ್ಬ ಅವರ ಹೆಂಡತಿ ಹೆಸರಿನಲ್ಲಿ ಒಂದೇ ಸಂಖ್ಯೆಯ ವಾಹನವನ್ನು ಮೆಸ್ಕಾಂ ಮತ್ತು ಆರೋಗ್ಯ ಇಲಾಖೆ ಬಾಡಿಗೆಗೆ ಬಿಟ್ಟು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ತಿಳಿಸಿದರು.
ಶೃಂಗೇರಿ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿಯ ಸಿಬ್ಬಂದಿ ಶಿಕ್ಷಕರು ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿಲ್ಲ ಎಂದು ದೂರು ಬರುತ್ತಿವೆ. ಆರೋಗ್ಯ ಇಲಾಖೆಯವರು ಲ್ಯಾಬ್ ಟೆಕ್ನಿಶೀಯನ್ ಕೆಲಸ ಕೊಡುತ್ತೇವೆಂದು 20 ಸಾವಿರ ರೂ. ಲಂಚ ತೆಗೆದುಕೊಂಡು 1 ವರ್ಷ ಕೆಲಸ ಮಾಡಿಸಿ ಈಗ ಕೆಲಸದಿಂದ ತೆಗೆದು ಹಾಕಿದ್ದಾರೆ. ಎನ್.ಎಚ್.ಆರ್. ಸ್ಕೀಮ್‌ನಲ್ಲಿ ಅವ್ಯವಹಾರ ಮಾಡಿದ್ದಾರೆ. ಡಿ.ಎಚ್.ಒ. ಅವರು ಇದರ ಬಗ್ಗೆ ಸಮಗ್ರ ಮಾಹಿತಿ ನೀಡಬೇಕೆಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಸದಾಶಿವ ಪಿ.ರಾಘವನ್ ಮಾತನಾಡಿ, ಶಿಕ್ಷಣ ಇಲಾಖೆಯವರು ಕೋಳಿಫಾರಂ ಮತ್ತು ಮದ್ಯದ ಅಂಗಡಿ ಬಳಿ ಶಾಲಾ-ಕಾಲೇಜುಗಳನ್ನು ತೆರೆಯುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಏನಾಗಬಾರದುಎಂದು ಶಿಕ್ಷಣ ಇಲಾಖೆಯ ಅ ಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಮುಖ್ಯ ಶಿಕ್ಷಕರ ಇಂಕ್ರಿಮೆಂಟ್ ಮತ್ತು ಪ್ರಭಾರಿ ಭತ್ಯೆ ನೀಡುತ್ತಿಲ್ಲ ಎಂದು ದೂರುಗಳು ಬಂದಿವೆ. ಎನ್.ಆರ್.ಪುರದಲ್ಲಿ ಶಾಲೆಯೊಂದು ಬೀಳುವ ಸ್ಥಿತಿಯಲ್ಲಿದೆ. ಅದನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಶಶಿಕಲಾ ಅವಿನಾಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾರ್ನಿಂಗ್ ತರಗತಿಯನ್ನು ಮಾಡುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಕಾವೇರಿ ಲಕ್ಕಪ್ಪ, ಕೆ.ಎಚ್.ವನಮಾಲ ದೇವರಾಜ್, ಬಿ.ಎನ್.ನಿಖೀಲ್ ಚಕ್ರವರ್ತಿ, ಉಪಕಾರ್ಯದರ್ಶಿ ರಾಜ್‌ಗೋಪಾಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.