Advertisement

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

08:23 PM Nov 21, 2024 | Team Udayavani |

ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ವೃದ್ಧ ದಂಪತಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಲ್ಲಂ ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಳಗಾಮೆ ಗ್ರಾಮದಲ್ಲಿ ಬುಧವಾರ ರಾತ್ರಿ(ನ20) ನಡೆದಿದೆ. ಹತ್ಯೆ ಮಾಡಿದ ಮೊಮ್ಮಗ ಪರಾರಿಯಾಗಿದ್ದಾನೆ.

Advertisement

ಮೂಲತಃ ಗುಬ್ಬಿಯವರಾದ ಬಸಪ್ಪ (65) ಅವರ ಪತ್ನಿ ಲಲಿತಮ್ಮ (58) ಮೊಮ್ಮಗನಿಂದ ಹತ್ಯೆಯಾಗಿದ್ದು, ಹತ್ಯೆ ಮಾಡಿದ ನಿಶಾಂತ್ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಚಿಕ್ಕಮಗಳೂರು ತಾಲೂಕು ಮಲ್ಲಂದೂರು ಕೊಳಗಾಮೆ ಗ್ರಾಮದ ಮೊಗಣ್ಣಗೌಡ ಎಂಬವರ ಕಾಫಿತೋಟದಲ್ಲಿ ಕಳೆದ 25 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ವೃದ್ಧ ದಂಪತಿ ಕೊಳಗಾಮೆ ಗ್ರಾಮದಲ್ಲಿ ವಾಸವಾಗಿದ್ದರು. ಬುಧವಾರ ರಾತ್ರಿ ಬಸಪ್ಪನ ಅಣ್ಣನ ಮಗಳ ಮಗನಾದ ನಿಶಾಂತ್ ಬಸಪ್ಪನ ಮನೆಗೆ ಬಂದಿದ್ದು, ಮೊಮ್ಮಗನಾದ ನಿಶಾಂತ್ ಹಣಕಾಸಿನ ವಿಚಾರಕ್ಕೆ ಬಸಪ್ಪ ಹಾಗೂ ಲೀಲಪ್ಪ ದಂಪತಿಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ದಂಪತಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೊಮ್ಮಗ ನಿಶಾಂತ್ ಬೆಂಗಳೂರಿನಲ್ಲಿದ್ದು, ಆಗಾಗ್ಗೆ ಬಸಪ್ಪ, ಲೀಲಮ್ಮ ಅವರ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನ ಲಾಗುತ್ತಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಲ್ಲಂದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದ್ದಾರೆ. ಕೊಳಗಾಮೆ ಗ್ರಾಮದಲ್ಲಿ ವೃದ್ಧ ದಂಪತಿಗೆ ಸಂಬಂಧಿಕರು ಇಲ್ಲದ ಕಾರಣಕ್ಕೆ ಗುಬ್ಬಿಯಲ್ಲಿರುವ ಮೃತರ ಸಂಬಂಧಿಗಳಿಗೆ ಮಾಹಿತಿ ನೀಡಲಾಗಿದೆ. ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಮೊಮ್ಮಗ ನಿಶಾಂತ್ ಬಂಧನಕ್ಕೆ ಮಲ್ಲಂದೂರು ಪೊಲೀಸರು ಬಲೆ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.