Advertisement

ಪರಿಸರ ರಕ್ಷಣೆ ಕಾರ್ಯಕ್ಕೆ ಮುಂದಾಗಿ: ಸಚಿವ ರವಿ

04:05 PM Jun 15, 2020 | Naveen |

ಚಿಕ್ಕಮಗಳೂರು: ಪರಿಸರ ಬೆಳೆಸಿ ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ದ್ದಾಗಿದ್ದು ಪರಿಸರ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕೆಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

Advertisement

ನಗರದ ಹಿರೇಮಗಳೂರಿನ ಪ್ರಭು ಲಿಂಗೇಶ್ವರ ಶಾಲಾ ಆವರಣದಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಹಾಗೂ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಸಿರೇ ಉಸಿರು ಎನ್ನುವ ಉದ್ದೇಶದಿಂದ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ನಮ್ಮನ್ನು ನಾವು ಉಳಿಸಿಕೊಳ್ಳಲು ಪರಿಸರವನ್ನು ಉಳಿಸುವುದು ಅತ್ಯವಶ್ಯವಾಗಿದೆ. ಸಾಕಷ್ಟು ಗಿಡ- ಮರಗಳನ್ನು ಬೆಳೆಸುವುದರೊಂದಿಗೆ ಅದರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು.

ನಗರಸಭಾ ಮಾಜಿ ಅಧ್ಯಕ್ಷ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಮರ- ಊರಿಗೊಂದು ವನ ಎಂಬಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಭೂ ಲೋಕದ ಸ್ವರ್ಗದಂತಿದ್ದು ಮುಂದಿನ ದಿನಗಳಲ್ಲಿ ನಗರದೆಲ್ಲೆಡೆ ಹೆಚ್ಚು ಮರ-ಗಿಡಗಳನ್ನು ನೆಡುವ ಮೂಲಕ ಹಸಿರು ಕಂಗೊಳಿಸುವಂತೆ ಮಾಡಬೇಕು ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್‌ ಮಾತನಾಡಿ, ರೈತರಿಗೆ ಮರ- ಗಿಡಗಳನ್ನು ಬೆಳೆಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರತಿ ಗಿಡಕ್ಕೆ ರೂ.125 ಗಳನ್ನು ನೀಡಲಾಗುತ್ತಿದೆ. ಜೊತೆಗೆ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಗಿಡಗಳನ್ನು ವಿತರಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು. ಖ್ಯಾತ ವಾಗ್ಮಿ ಹಿರೇಮಗಳೂರು ಕಣ್ಣನ್‌, ಬಿಜೆಪಿ ಮುಖಂಡ ಮಧುಕುಮಾರ್‌ ಅರಸ್‌, ರಾಜಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next