Advertisement

Chikkamagaluru; ಮಲೆನಾಡಿನಲ್ಲಿ ಐವರಿಗೆ ಕೆಎಫ್‌ಡಿ ಪ್ರಕರಣ ಪತ್ತೆ

11:51 PM Feb 11, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಶನಿವಾರ ಒಂದೇ ದಿನ ಐದು ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.

Advertisement

ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 12 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು ಇಲ್ಲಿನ ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಶನಿವಾರ ಪತ್ತೆಯಾದ ಐದು ಮಂಗನ ಕಾಯಿಲೆ ಪ್ರಕರಣಗಳು ಕೊಪ್ಪ ತಾಲೂಕಿನವು ಆಗಿವೆ. ಶೃಂಗೇರಿ ತಾಲೂಕಿನ ಬೇಗಾರು ಗ್ರಾಮದ 79 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದರು. ಜಿಲ್ಲೆಯಲ್ಲಿ 12 ಜನರಲ್ಲಿ
ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಇನ್ನೂ ಕೆಲವರು ಚಿಕಿತ್ಸೆ ಪಡೆ ಯುತ್ತಿದ್ದಾರೆ. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next