Advertisement

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

07:35 PM Jun 08, 2023 | Team Udayavani |

ಚಿಕ್ಕಮಗಳೂರು: ಹಲವು ಶ್ರೀಗಂಧ ಮರಗಳ ಕಳ್ಳತನದಲ್ಲಿ ಭಾಗಿಯಾಗಿದ್ದ ಕುಖ್ಯಾತ ನಾಲ್ವರು ಕಳ್ಳರನ್ನು ಬಂಧಿಸುವಲ್ಲಿ ಕಡೂರು ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement

ಕಡೂರು ತಾಲೂಕಿನ ಎಮ್ಮೆದೊಡ್ಡಿ ಹುಲಿ ಮೀಸಲು ಅರಣ್ಯದಲ್ಲಿ ಶ್ರೀಗಂಧ ಕಳ್ಳತನ ಮಾಡುತ್ತಿದ್ದ ವೇಳೆ ಕಳ್ಳರು ಸಿಕ್ಕಿಬಿದ್ದಿದ್ದು, ಬಂಧಿತರು ಕುಖ್ಯಾತ ಶ್ರೀಗಂಧ ಕಳ್ಳರಾದ ಕರಿಯಪ್ಪ,ಶಿವರಾಜ್, ಬಾಲಕೃಷ್ಣ, ಪರಮೇಶ್ ಎನ್ನುವವರಾಗಿದ್ದಾರೆ.

ಬಂಧಿತರಿಂದ 21 ಕೆ.ಜಿ ಶ್ರೀಗಂಧ, ಕೊಡಲಿ ಬೈಕ್ ಹಾಗೂ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಚಿಕ್ಕಮಗಳೂರಿನಲ್ಲಿ ಶ್ರೀಗಂಧ ಕಳ್ಳತನ ಮಾಡಿ ಹೊರ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ನೇತೃತ್ವವನ್ನು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ, ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next