Advertisement

Chikkamagaluru: ವಕೀಲರ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

11:52 PM Dec 04, 2023 | Team Udayavani |

ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ಚಿಕ್ಕಮಗಳೂರಿನ ನಾಲ್ವರು ವಕೀಲರ ಮೇಲೆ ದಾಖಲಾಗಿರುವ ಎಫ್ಐಆರ್‌ಗೆ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿದೆ.

Advertisement

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ವಕೀಲರಾದ ಡಿ.ಬಿ. ಸುಜೇಂದ್ರ, ಎ.ಕೆ. ಭುವನೇಶ್‌, ಕೆ.ಬಿ. ನಂದೀಶ್‌ ಮತ್ತು ಎಚ್‌.ಎಂ. ಸುಧಾಕರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆ
ಸಿದ ನ್ಯಾ| ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಫ್ಐಆರ್‌ಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.

ಇದೇ ವೇಳೆ ವಕೀಲ ಪ್ರೀತಮ್‌ ಅವರ ಮೇಲೆ ಪೊಲೀಸರ ದಾಖಲಿಸಿಕೊಂಡಿರುವ ಪ್ರತಿ ದೂರಿಗೆ ಸಂಬಂಧಿಸಿ ಚಿಕ್ಕಮಗಳೂರು ನಗರ ಠಾಣಾ ಪೊಲೀಸರಿಗೆ ನ್ಯಾಯಪೀಠ ನೋಟಿಸ್‌ ಜಾರಿಗೊಳಿಸಿದೆ.

ಸಿಎಂ ಮಧ್ಯಪ್ರವೇಶಕ್ಕೆ ಬೊಮ್ಮಾಯಿ ಆಗ್ರಹ
ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಉಂಟಾಗಿರುವುದು ಆತಂಕಕಾರಿ ಬೆಳವಣಿಗೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆ ಮೇಲೆ ಸರಕಾರ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ. ಗೃಹ ಇಲಾಖೆಯ ಅಶಿಸ್ತು ಗಂಭಿರ ವಿಚಾರ. ಸರಕಾರ ಸರಿಪಡಿಸದಿದ್ದರೆ ರಾಜ್ಯದಲ್ಲಿ ಅರಾಜಕತೆ ಉಂಟಾದೀತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next