Advertisement

Chikkamagaluru: ಗಾಳಿ-ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿತ; ತಪ್ಪಿದ ಭಾರೀ ಅನಾಹುತ

01:15 PM Jul 24, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿಗೆ ಮನೆ ಗೋಡೆ ಕುಸಿದಿದೆ.

Advertisement

ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಗೋಡೆ ಮನೆಯ ಹೊರಭಾಗಕ್ಕೆ ಬಿದ್ದಿದೆ. ಒಳ ಭಾಗಕ್ಕೆ ಬಿದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.

ಗೋಡೆ ಕುಸಿತದಿಂದ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದು ನಾಗೇಶ್ ಶೆಟ್ಟಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಮನೆಯ ಮುಂಭಾಗದ ಗೋಡೆ ಕುಸಿದಿದ್ದು ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಂಡಿದೆ.

Advertisement

ಸ್ಥಳಕ್ಕೆ ಪಂಚಾಯತ್ ಅಧಿಕಾರಿ ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ನದಿಯಲ್ಲಿ ಸಿಲುಕಿದ್ದ ದನಗಳ ರಕ್ಷಣೆ

ಭದ್ರಾ ನದಿಯಲ್ಲಿ ಸಿಲುಕಿದ್ದ ದನಗಳ ರಕ್ಷಣೆ ಮಾಡಲಾಗಿದೆ. ನರಸಿಂಹರಾಜಪುರ ತಾಲೂಕಿನ ಹೊನ್ನೆಕೊಡಿಗೆ ಸಾಲೂರು ಬಳಿ ನದಿ ಮದ್ಯದ ದ್ವೀಪದಂತಹ ಸ್ಥಳದಲ್ಲಿ ದನಗಳು ಸಿಲುಕಿಕೊಂಡಿದ್ದು ಭದ್ರಾ ಹುಲಿ ಸಂರಕ್ಷಿತಾರಣ್ಯದ ಸಿಬ್ಬಂದಿ ಹಾಗೂ ಸ್ಥಳೀಯರು ಬೋಟ್ ಬಳಸಿ ದನಗಳನ್ನು ರಕ್ಷಣೆ ಮಾಡಿದ್ದಾರೆ.

ಸಾಲೂರು ಸಮೀಪ ದ್ವೀಪದಂತಹ ಸ್ಥಳಕ್ಕೆ ದನಗಳು ಮೇಯಲು ತೆರಳಿದ್ದು, ಬೋಟ್ ಮೂಲಕ ತೆರಳಿದ ಸಿಬ್ಬಂದಿಗಳು ಹಾಗೂ ಸ್ಥಳೀಯರು ದನಗಳನ್ನು ದಡ ಸೇರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next