Advertisement

ಸ್ವಾತಂತ್ರ್ಯ ಅಮೃತ ಮಹೋತ್ಸವ : ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

10:43 AM Aug 15, 2022 | Team Udayavani |

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

Advertisement

ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಮುಂದಾಳತ್ವದಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದರು.

ಸ್ವತಃ ತಾನೇ ಮುಂದೆ ನಿಂತು ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜಾರೋಹಣ ಮಾಡಿಸಿ ಗಮನ ಸೆಳೆದಿದ್ದಾರೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ 2000ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು, ಧ್ವಜಾರೋಹಣಕ್ಕೂ ಮೊದಲು ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next